7
March, 2026

A News 365Times Venture

7
Saturday
March, 2026

A News 365Times Venture

ಶಾಸಕ ರಾಯರೆಡ್ಡಿ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ- ಆರ್.ಅಶೋಕ್ ಟೀಕೆ

Date:

ಬೆಂಗಳೂರು,ಏಪ್ರಿಲ್,10,2025 (www.justkannada.in):  ಭ್ರಷ್ಟಾಚಾರದಲ್ಲಿ ಕರ್ನಾಟಕ  ನಂ.1 ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಹಾಗೂ ಕಾಂಗ್ರೆಸ್ ಶಾಸಕ  ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದೆ. ಹಾಗಾಗಿಯೇ ರಾಜ್ಯಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಿದೆ. 20 ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದರಿಂದ ರಾಜ್ಯದ ಖಜಾನೆ ಬರಿದಾಗಿ, ಸರ್ಕಾರ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿಎಂ  ಸಿದ್ದರಾಮಯ್ಯ ಮತ್ತು ಸಚಿವರು ಎಲ್ಲಿಯೂ ಪ್ರವಾಸ ನಡೆಸುತ್ತಿಲ್ಲ. ಭೇಟಿ ನೀಡಿದ ಕಡೆ ಜನರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಕಾಲಹರಣ ಮಾಡುತ್ತಿದ್ದಾರೆ. ಒಂದು ಕಡೆ ದರ ಏರಿಕೆ ಬರೆ, ಮತ್ತೊಂದು ಕಡೆ ಯಾವ ಕಚೇರಿಗೆ ಹೋದರೂ ಲಂಚದ ಹಾವಳಿಯಿಂದ ಜನ ಆಕ್ರೋಶಗೊಂಡಿದ್ದಾರೆ ಎಂದು ಆರ್.ಅಶೋಕ್ ಕಿಡಿಕಾರಿದರು.

Key words: MLA, Raiyareddy,  statement, R. Ashok

The post ಶಾಸಕ ರಾಯರೆಡ್ಡಿ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ- ಆರ್.ಅಶೋಕ್ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...