30
April, 2026

A News 365Times Venture

30
Thursday
April, 2026

A News 365Times Venture

ಇಂದು ನಟ ಸಾರ್ವಭೌಮ ಡಾ.ರಾಜ್‌ ಕುಮಾರ್ ಅವರ 19ನೇ ಪುಣ್ಯಸ್ಮರಣೆ: ಕುಟುಂಬಸ್ಥರಿಂದ ಪೂಜೆ

Date:

ಬೆಂಗಳೂರು,ಏಪ್ರಿಲ್,12,2025 (www.justkannada.in):  ಕನ್ನಡ ಚಿತ್ರರಂಗದಲ್ಲಿ ಸುಮಾರು 5 ದಶಕಗಳ ಕಾಲ ಮಿಂಚಿ ಮರೆಯಾದ ಕನ್ನಡಿಗರ ಕಣ್ಮಣಿ ನಟ ಸಾರ್ವಭೌಮ ಡಾ.ರಾಜ್​ಕುಮಾರ್ ಅವರ 19ನೇ ಪುಣ್ಯಸ್ಮರಣೆ ದಿನವಾಗಿದ್ದು. ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದರು.

ನಟ ಡಾ.ರಾಜ್ ಕುಮಾರ್ ಅವರು 2006ರ ಏಪ್ರಿಲ್​​ 12ರಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅಂದು ಕರುನಾಡಿಗೆ ಬರಸಿಡಿಲು ಬಡಿದಂತಾಗಿತ್ತು. ಆದ್ರೆ ಅವರ ನೆನಪು ಪ್ರತೀ ಕನ್ನಡಿಗರೆದೆಯಲ್ಲಿ ಅಚ್ಚಳಿಯದೇ ಉಳಿದಿದೆ. ಇಂದಿಗೂ ಕನ್ನಡ ಚಿತ್ರರಂಗದ ಕೀರ್ತಿಯಾಗಿ ಅವರ ನಟಸಾರ್ವಭೌಮನ ಸ್ಮರಣೆಯಾಗುತ್ತಿದೆ.

ನಟ ರಾಜ್ ಕುಮಾರ್ ಅವರ ಸಮಾಧಿಗೆ  ಕುಟುಂಬಸ್ಥರು ಪೂಜೆ ಸಲ್ಲಿಕೆ ಮಾಡಿದ್ದಾರೆ.  ಮೊದಲು ನಟ ದಿ. ಪುನೀತ್ ರಾಜ್ ಕುಮಾರ್ ಮತ್ತು  ಪಾರ್ವತಮ್ಮ ಅವರ ಸಮಾಧಿಗೆ ಪೂಜೆ  ಸಲ್ಲಿಸಿದ ಬಳಿಕ ಅಣ್ಣವ್ರಿಗೆ ಪೂಜೆ ಸಲ್ಲಿಕೆ ಮಾಡಲಾಗಿದೆ.

ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಭದ್ರವಾಗಿ ವಿರಾಜಮಾನವಾಗಿರುವ ರಾಜ್‌ ಅವರ ಅಭಿಮಾನಿಗಳು ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಅವರ ಪುಣ್ಯ ಸ್ಮರಣೆ ಮಾಡಲಿದ್ದಾರೆ.

Key words: Today, actor  Dr. Raj Kumar, Commemoration, family

The post ಇಂದು ನಟ ಸಾರ್ವಭೌಮ ಡಾ.ರಾಜ್‌ ಕುಮಾರ್ ಅವರ 19ನೇ ಪುಣ್ಯಸ್ಮರಣೆ: ಕುಟುಂಬಸ್ಥರಿಂದ ಪೂಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...