24
August, 2026

A News 365Times Venture

24
Monday
August, 2026

A News 365Times Venture

ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ

Date:

ಬೆಂಗಳೂರು, ಏಪ್ರಿಲ್​ 26,2025 (www.justkannada.in):  ಸಿಇಟಿ ಪರೀಕ್ಷೆ  ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮರು ಪರೀಕ್ಷೆಗೆ ಮನವಿ ಮಾಡಿದೆ.

ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್​ ಅರ್ಜಿ ಸಲ್ಲಿಸಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬಳಿಕ  ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್‌ 16 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಬೀದರ್‌ ನಲ್ಲಿ ಜನಿವಾರ ತೆಗೆಯೋದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿಯನ್ನ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿರಲಿಲ್ಲ. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

Key words: Janivara Case, PIL, High Court

The post ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...