30
April, 2026

A News 365Times Venture

30
Thursday
April, 2026

A News 365Times Venture

ಸಿಎಂ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ: ಮೈ ಮೇಲೆ ಸಗಣಿ ಸುರಿದುಕೊಂಡು ಧರಣಿ

Date:

ಮೈಸೂರು,ಏಪ್ರಿಲ್,26,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮೈಸೂರು ಪ್ರವಾಸ ಕೈಗೊಂಡಿದ್ದು ಪಿರಿಯಾಪಟ್ಟಣಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಇದೀಗ ಪ್ರತಿಭಟನೆ ಬಿಸಿ ತಟ್ಟಿದೆ.

ಪಿರಿಯಾಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸುವ ಮುನ್ನವೇ ಪಿರಿಯಾಪಟ್ಟಣ ತಾಲೂಕು ಆಡಳಿತ ಕಚೇರಿ  ಎದುರು ಮೈ ಮೇಲೆ ಸಗಣಿ ಸುರಿದುಕೊಂಡು ಅಮಾನವೀಯ ಪ್ರತಿಭಟನೆ ನಡೆದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಚಾಮರಾಜನಗರ ಉಸ್ತುವಾರಿ ಸಚಿವ  ಕೆ.ವೆಂಕಟೇಶ್ ಉಪಸ್ಥಿತರಿರಲಿದ್ದಾರೆ.

ಇದಕ್ಕೂ ಮುನ್ನ ಪ್ರತಿಭಟನೆ ಬಿಸಿ ತಟ್ಟಿದ್ದು, ಪ್ರಭಾವಿಗಳು ದಲಿತರ ಹಾಗೂ ರೈತರ ಭೂಮಿ ಕಬಳಿಸಿದ್ದಾರೆ. ಕಳೆದ‌ ಮೂರು ವರ್ಷಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದಸಂಸ ಮುಖಂಡ ಸಿ.ಎಸ್. ಜಗದೀಶ್, ಮುಮ್ಮಡಿ ಕಾವಲ್ ದೊಡ್ಡಯ್ಯ ಅವರು ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಚನ್ನಕಲ್ ಕಾವಲು ಗ್ರಾಮದ ಸರ್ವೇ ನಂಬರ್ 1 ಮತ್ತು 3ರ ಭೂಮಿ ಸಮಸ್ಯೆ ಬಗೆಹರಿಸಿ, ಸೂಳೆಕೋಟೆ ಸರ್ವೆ ನಂಬರ್ 10 ರ ದಾಖಲಾತಿಗಳನ್ನು ತಿರುಚಿದವರ ಮೇಲೆ ಕಾನೂನು ಕ್ರಮವಾಗಬೇಕು ಎಂದು ಪ್ರತಿಭಟನಾಕಾರರು  ಆಗ್ರಹಿಸಿದ್ದಾರೆ.

Key words: Protests, Mysore,  CM Siddaramaiah, pouring, dung

The post ಸಿಎಂ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ: ಮೈ ಮೇಲೆ ಸಗಣಿ ಸುರಿದುಕೊಂಡು ಧರಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...