11
March, 2026

A News 365Times Venture

11
Wednesday
March, 2026

A News 365Times Venture

ಸಕಲ ಸರ್ಕಾರಿ ಗೌರವದೊಂದಿಗೆ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಅಂತ್ಯಕ್ರಿಯೆಗೆ ನಿರ್ಧಾರ

Date:

ಬೆಂಗಳೂರು,ಏಪ್ರಿಲ್,26,2025 (www.justkannada.in): ನಿನ್ನೆ ಅನಾರೋಗ್ಯದಿಂದ ನಿಧನರಾದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಮುಖ್ಯಸ್ಥರು, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ  ಡಾ.ಕೆ.ಕಸ್ತೂರಿ ರಂಗನ್ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿಗೌರವದೊಂದಿಗೆ ನೆರವೇರಿಸಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ರಾಜ್ಯಪಾಲರ ಆಜ್ಞಾನುಸಾರ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ-1 ಬಾಣದರಂಗಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಮುಖ್ಯಸ್ಥರು, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ  ಡಾ.ಕೆ.ಕಸ್ತೂರಿ ರಂಗನ್  ದಿ.25.04.2025 ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಸ್ತೂರಿ ರಂಗನ್ ಅವರು  ನಿನ್ನೆ ಬೆಂಗಳೂರಿನ ಕೊಡಿಗೇನಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಸ್ತೂರಿ ರಂಗನ್ ಅವರಿಗೆ 84 ವರ್ಷ ವಯಸ್ಸಾಗಿತ್ತು.

1994ರಿಂದ 2003ರವರೆಗೆ  ಇಸ್ರೋ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕಸ್ತೂರಿ ರಂಗನ್ ಅವರು,  ಅನೇಕ ರಾಕೆಟ್‌ ಗಳ ಉಡಾವಣೆ, ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಇಸ್ರೋ ಬೆಳವಣಿಗೆಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಕಸ್ತೂರಿ ರಂಗನ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಅಂದು ಬೆಳಿಗ್ಗೆ 10ರಿಂದ 12ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ನಂತರ ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗುತ್ತಿದೆ.

Key words:  Former ISRO Chairman, Dr. K. Kasturirangan, funeral, honours

The post ಸಕಲ ಸರ್ಕಾರಿ ಗೌರವದೊಂದಿಗೆ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಅಂತ್ಯಕ್ರಿಯೆಗೆ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...