ಬೆಂಗಳೂರು,ಏಪ್ರಿಲ್,28,2025 (www.justkannada.in): ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಮೊದಲು ಮಂಗಳಸೂತ್ರ, ಜನಿವಾರ ನಿಷೇಧ ಆದೇಶ ಹಿಂಪಡೆಯಲಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು ಈ ಬಗ್ಗೆ ಜಾಗೃತ ಮೂಡಿಸಲು ಬೆಳಗಾವಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: DCM, DK Shivakumar, central government, withdraw, ban, Mangalsutra, janivar
The post ಕೇಂದ್ರ ಸರ್ಕಾರ ಮಂಗಳಸೂತ್ರ, ಜನಿವಾರ ನಿಷೇಧ ಆದೇಶ ಹಿಂಪಡೆಯಲಿ: ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




