10
March, 2026

A News 365Times Venture

10
Tuesday
March, 2026

A News 365Times Venture

ಎಸ್.ಸಿ ಒಳ ಮೀಸಲಾತಿ ಜಾರಿಗೆ ನಮ್ಮ ಸರ್ಕಾರ ಬದ್ಧ: ಇಂದಿನಿಂದ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಮೇ 5,2025 (www.justkannada.in): ರಾಜ್ಯದಲ್ಲಿ  ಎಸ್.ಸಿ ಒಳ ಮೀಸಲಾತಿ ಜಾರಿ ಮಾಡಲು ನಮ್ಮ ಸರ್ಕಾರ ಬದ‍್ಧವಾಗಿದೆ. ಇಂದಿನಿಂದ  ಸಮೀಕ್ಷೆ ಆರಂಭವಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ.   ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ಕೊಡಲು ಆಯೋಗ ರಚಿಸಲಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೇವೆ. ನಾಗಮೋಹನ್ ದಾಸ್ ಸಮಿತಿ ಇಂದಿನಿಂದ ಗಣತಿದಾರರು, ಮೇಲ್ವಿಚಾರಕರಿಗೆ ತರಬೇತಿ ನೀಡಲಿದ್ದು, ಅವರು ಮನೆ ಮನೆಗೆ ತೆರಳಲಿದ್ದಾರೆ. ಒಳಮೀಸಲಾತಿ ಸಮೀಕ್ಷೆ  ಮೂರು ಹಂತಗಳಲ್ಲಿ ನಡೆಯಲಿದೆ. ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಒಟ್ಟು ಮೂರು ಹಂತಗಳಲ್ಲಿ ಒಳ ಮೀಸಲಾತಿ ಸಮೀಕ್ಷೆ ನಡೆಯಲಿದೆ.  ನಾಗಮೋಹನ್ ದಾಸ್ ಆಯೋಗ  ವರದಿಗೆ ಸಿದ್ದತೆ ಮಾಡಿಕೊಂಡಿದೆ. ವೈಜ್ಞಾನಿಕವಾಗಿ ಪಾರದರ್ಶಕವಾಗಿ ಸಮೀಕ್ಷೆ ಆಗಬೇಕು.  ವಿಶೇಷ ವಾಗಿ  ಕರಾರುವಕ್ಕಾಗಿ  ಎಸ್ ಸಿ ಜನಸಂಖ್ಯೆ ಗೊತ್ತಾಗಲಿ ಅಂತಾ ನಮ್ಮಸರ್ಕಾರ ಒಳ ಮೀಸಲಾತಿ ಗಣತಿ ಮಾಡುತ್ತಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಉಪ ಜಾತಿಗಳು ಇವೆ. ಪರಿಶಿಷ್ಟ ಜಾತಿಗಳಲ್ಲಿ ಎಡ, ಬಲ, ಕೊರಚ, ಕೊರಮ, ಲಂಬಾಣಿಗಳು ಇದ್ದಾರೆ. ಒಳ ಮೀಸಲಾತಿ ಕೊಡುವಂತೆ ಸುಪ್ರೀಂ ಕೋರ್ಟ್​ ನಿರ್ದೇಶನ ನೀಡಿದೆ. ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಎಂಬುದಾಗಿ ಎಡಗೈ ಹಾಗೂ ಬಲಗೈ ಸಮುದಾಯದವರು ಬರೆಸಿರುತ್ತಾರೆ ಎಂದು  ತಿಳಿಸಿದರು.

ಒಳಮೀಸಲಾತಿ ಸಮೀಕ್ಷೆ ಕಾರ್ಯಕ್ಕೆ 65 ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಅವರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಪರಿಶಿಷ್ಟ ಜಾತಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಮೊದಲ ಹಂತದಲ್ಲಿ ಮನೆ ಮನೆಗೆ ತೆರಳಿ ಅಂಕಿ ಅಂಶ ಸಂಗ್ರಹ ಮಾಡಲಾಗುತ್ತದೆ. 2ನೇ ಹಂತದಲ್ಲಿ ಮೇ 19 ರಿಂದ 21 ರವರೆಗೆ ವಿಶೇಷ ಶಿಬಿರ ಆಯೋಜನೆ ಮಾಡಲಾಗಿದೆ. ಆ ಶಿಬಿರಗಳಿಗೂ ಬಂದು ಜನರು ಮಾಹಿತಿಗಳನ್ನು ನೀಡಬಹುದು. 3ನೇ ಹಂತ ಮೇ 19 ರಿಂದ 23 ರವರೆಗೆ ನಡೆಯಲಿದೆ. ಮೂರನೇ ಹಂತದಲ್ಲಿ ಆನ್ ​​ಲೈನ್ ಮೂಲಕ ಮಾಹಿತಿ ಸಂಗ್ರಹ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೊಬೈಲ್ ಆಪ್

ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು.   ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.  ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್,  ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Key words: Our government, implementing, SC, internal reservation, CM Siddaramaiah

The post ಎಸ್.ಸಿ ಒಳ ಮೀಸಲಾತಿ ಜಾರಿಗೆ ನಮ್ಮ ಸರ್ಕಾರ ಬದ್ಧ: ಇಂದಿನಿಂದ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...