26
August, 2026

A News 365Times Venture

26
Wednesday
August, 2026

A News 365Times Venture

ನಾನು ಸಚಿವ ಸ್ಥಾನದ ಆಕಾಂಕ್ಷಿ: ಸಂಪುಟ ವಿಸ್ತರಣೆ ವೇಳೆ ನನ್ನನ್ನೂ ಪರಿಗಣಿಸಿ-ಉಪಸಭಾಪತಿ ರುದ್ರಪ್ಪ ಲಮಾಣಿ

Date:

ಹಾವೇರಿ,ಮೇ,19,2025 (www.justkannada.in):  ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಚಿವ ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಬೇಕು ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರುದ್ರಪ್ಪ ಲಮಾಣಿ ಅವರು,  ನಮ್ಮ ಸಮುದಾಯದಿಂದ ನಾನೊಬ್ಬನೇ ಶಾಸಕನಿದ್ದೇನೆ. ಹೀಗಾಗಿ ಸಂಪುಟ ವಿಸ್ತರಣೆಯಾಗುವ ವೇಳೆ ನನ್ನನ್ನು ಪರಿಗಣಿಸಲಿ. ಕಳೆದ ಬಾರಿಯೂ ನನಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇತ್ತು. ಆದರೆ ರಣದೀಪ್ ಸುರ್ಜೆವಾಲಾ ಅವರು ಡಿಪ್ಯೂಟಿ ಸ್ಪೀಕರ್ ಮಾಡಿದರು. ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಆದರೆ ನನ್ನನ್ನು ಪರಿಗಣಿಸಲಿ ಎಂದರು.

ಇನ್ನು ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ನಡೆದ ಬಳಿಕ ಸಚಿವ ಸಂಪುಟ ವಿಸ್ತರಣೆ ಚರ್ಚೆಗೆ ಬರುವ ಸಾಧ್ಯತೆ ಇದ್ದು ಈಗಾಗಲೇ ಶಾಸಕ ಕೆಎಂ ಶಿವಲಿಂಗೇಗೌಡ ಸೇರಿ ಹಲವರು ಸಚಿವ ಸ್ಥಾನದ  ಆಕಾಂಕ್ಷಿಗಳಾಗಿದ್ದಾರೆ.

Key words: aspirant, ministerial post, Deputy Speaker, Rudrappa Lamani

The post ನಾನು ಸಚಿವ ಸ್ಥಾನದ ಆಕಾಂಕ್ಷಿ: ಸಂಪುಟ ವಿಸ್ತರಣೆ ವೇಳೆ ನನ್ನನ್ನೂ ಪರಿಗಣಿಸಿ-ಉಪಸಭಾಪತಿ ರುದ್ರಪ್ಪ ಲಮಾಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...