13
March, 2026

A News 365Times Venture

13
Friday
March, 2026

A News 365Times Venture

AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡುವಂತೆ ಸಿಎಂ‌ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಮೇ,30,2025 (www.justkannada.in):  ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ  ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.

ನಂತರ ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.vtu

Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ‌ ಎಂದರೆ ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.

ಸರಿಯಾಗಿ 30 ನಿಮಿಷಕ್ಕೆ ಸಿಎಂ ಖಡಕ್ ಎಂಟ್ರಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

DC ಮತ್ತು CEO ಗಳ ಸಭೆಗೆ ಮಧ್ಯಾಹ್ನ ಊಟದ ಬಿಡುವು 30 ನಿಮಿಷ ನೀಡಲಾಗಿತ್ತು. ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ‌ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದರು. ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.‌

ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ  ಸಿಎಂ ಸಿದ್ದರಾಮಯ್ಯ ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.

Key words: AC, DC Court, case, court, CM Siddaramaiah, Meeting

The post AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡುವಂತೆ ಸಿಎಂ‌ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು,ಮಾರ್ಚ್,13,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ...

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು...

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ...

ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು.

ಬೆಂಗಳೂರು,ಮಾರ್ಚ್,12,2026 (www.justkannada.in): ಕಾರವಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉತ್ತರ...