13
March, 2026

A News 365Times Venture

13
Friday
March, 2026

A News 365Times Venture

ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಮುಖ್ಯಶಿಕ್ಷಕ ಅಮಾನತು: ಸರ್ಕಾರದ ಕ್ರೌರ್ಯತನ ಖಂಡನೀಯ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮೇ,30,2025 (www.justkannada.in): ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಮುಖ್ಯಶಿಕ್ಷಕರೊಬ್ಬರನ್ನ ಅಮಾನತು ಮಾಡಿದ ಕಾಂಗ್ರೆಸ್ ಸರ್ಕಾರದ ಕ್ರೌರ್ಯತನ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಬಿವೈ ವಿಜಯೇಂದ್ರ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಚಕ್ರ ತುಕ್ಕು ಹಿಡಿದು ನಿಂತಿದೆ. ಕನಿಷ್ಠ ಶಿಕ್ಷಣ ಕ್ಷೇತ್ರಕ್ಕಾದರೂ ಅಲ್ಪವಾದರೂ ಕಾಯಕಲ್ಪ ನೀಡದ ನಿಷ್ಕ್ರೀಯತೆ ಪ್ರದರ್ಶಿಸಲಾಗುತ್ತಿದೆ ಎಂಬುದಕ್ಕೆ ಶಾಲಾ ಕೊಠಡಿಗಳಿಗಾಗಿ ಮಕ್ಕಳ ಶಿಕ್ಷಣದ ಪರ ಕಾಳಜಿಪೂರ್ವಕ ಪ್ರತಿಭಟನೆ ನಡೆಸಿದ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತ್ತು ಮಾಡಿ ಸರ್ಕಾರ ತನ್ನ ಕ್ರೌರ್ಯತನ ಮೆರದಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.vtu

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಕೊರತೆಯ ಕುರಿತು ನಿರಂತರ ನಿವೇದನೆ ಸಲ್ಲಿಸಿ ಇದು ನಿರರ್ಥಕವಾದಾಗ ಗತ್ಯಂತರವಿಲ್ಲದೇ ವೀರಣ್ಣ ಮಡಿವಾಳರ ಅವರು ಸರ್ಕಾರದ ಕಣ್ಣು ತೆರೆಸಲು ಶಿಕ್ಷಣ ಕಳಕಳಿಯ ಪ್ರತೀಕವಾಗಿ ಸಾತ್ವಿಕ ಪ್ರತಿಭಟನೆ ತೋರಿಸಿದ್ದಾರೆ, ಇದನ್ನು ಅಶಿಸ್ತು ಎಂದು ಪರಿಗಣಿಸಿ ಅವರನ್ನು ಸೇವೆಯಿಂದ ಅಮಾನತ್ತು ಪಡಿಸುವ ಕಠಿಣ ನಿರ್ಧಾರದ ಮೂಲಕ ಶಿಕ್ಷಣದಲ್ಲಿ ಸುಧಾರಣೆ ತರುವ ಸಮರ್ಪಣಾ ಮನೋಭಾವದ ಬದ್ಧತೆಯ ಶಿಕ್ಷಕರನ್ನು ಕಾಂಗ್ರೆಸ್ ಸರ್ಕಾರ ಶಿಕ್ಷಿಸಲು ಹೊರಟಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ, ಇದು ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಣದ ಬಗ್ಗೆ ಇರುವ ಉಪೇಕ್ಷೆ ಹಾಗೂ ತಾತ್ಸಾರವನ್ನು ತೋರಿಸಿದೆ.

ಅಮಾನತು ಹಿಂಪಡೆದು ಮೂಲಭೂತ ಸೌಕರ್ಯಗಳನ್ನು ಒದಗಿಸಿ

ವೀರಣ್ಣ ಮಡಿವಾಳ ಅವರ ಅಮಾನತು ಕೂಡಲೇ ಹಿಂಪಡೆದು ಸದರಿ ಶಾಲೆಗೆ ಅಗತ್ಯ ಕೊಠಡಿಗಳ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕೆಂದು ಸಂಕಲ್ಪ ತೊಟ್ಟು ಈಗಾಗಲೇ ಸದರಿ ಶಾಲೆಯ ಘನತೆಯನ್ನು ರಾಷ್ಟ್ರ ಮಟ್ಟದಲ್ಲಿ ಗಮನಸೆಳೆಯುವ ಮಟ್ಟದಲ್ಲಿ ಚಟುವಟಿಕೆಯಿಂದಿರಿಸಿರುವ ವೀರಣ್ಣ ಮಡಿವಾಳರ ಅವರನ್ನು ಸರ್ಕಾರ ಗೌರವಿಸಲಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಶಾಲೆ ದೇಶದ ಅತ್ಯತ್ತಮ ಸರ್ಕಾರಿ ಶಾಲೆಗಳಲ್ಲೊಂದು ಎಂಬ ಹೆಗ್ಗಳಿಕೆ ಪಡೆದು ಕೊಂಡಿದೆ, ಅನೇಕ ಶಿಕ್ಷಣ ತಜ್ಞರಿಂದ ಪ್ರಶಂಸೆಗೊಳಗಾಗಿದೆ. ನಾಡಿನ ಪ್ರತಿಷ್ಠಿತ ಮಾಧ್ಯಮಗಳು ಸದರಿ ಶಾಲೆಯ ಕುರಿತು ಸಾಕ್ಷ್ಯ ಚಿತ್ರವನ್ನು ನಿರ್ಮಿಸಿವೆ, ಈ ಹಿರಿಮೆಗಳ ಹಿನ್ನಲೆಯಲ್ಲಿ ಸರ್ಕಾರ ಶಾಲೆಯ ಈ ಸಾಧನೆಯನ್ನು ಗುರುತಿಸಬೇಕಿತ್ತು, ಅಗತ್ಯ ವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸ ಬೇಕಿತ್ತು, ಅಕ್ಷರ ವಂಚಿತ ಅತೀ ಹಿಂದುಳಿದ ಸಮುದಾಯದಿಂದ ಬಂದು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಯ ಹೆಜ್ಜೆಗಳನ್ನಿಟ್ಟಿರುವ ಶಿಕ್ಷಕ ವೀರಣ್ಣ ಮಡಿವಾಳ ಅವರನ್ನು ಅಭಿನಂದಿಸಿ ಗೌರವಿಸ ಬೇಕಿತ್ತು, ಆದರೆ ಇದರ ಬದಲಾಗಿ ಅವರನ್ನು ಅಮಾನತ್ತುಗೊಳಿಸಿ ಶಿಕ್ಷೆ ವಿಧಿಸಿರುವ ರಾಜ್ಯ ಸರ್ಕಾರದ ನಿರ್ಧಾರ ಶಿಕ್ಷಣ ವಿರೋಧಿ ನಡೆಯಾಗಿದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Key words: Headmaster, suspended, school room, Government, BY Vijayendra

The post ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಮುಖ್ಯಶಿಕ್ಷಕ ಅಮಾನತು: ಸರ್ಕಾರದ ಕ್ರೌರ್ಯತನ ಖಂಡನೀಯ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ...

ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ ಎಂದು...

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,13,2026 (www.justkannada.in):  ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ...

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ ವರುಣಾ...