12
March, 2026

A News 365Times Venture

12
Thursday
March, 2026

A News 365Times Venture

‘ಕೆಂಪೇಗೌಡ ತೀಮ್ ಪಾರ್ಕ್’ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ

Date:

ಬೆಂಗಳೂರು ಗ್ರಾಮಾಂತರ , ಜೂನ್,2,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದಲ್ಲಿ ನಡೆಯುತ್ತಿರುವ ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪರಿಶೀಲನೆ ನಡೆಸಿದರು.

ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಸುತ್ತಲೂ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣಗೊಳ್ಳುತ್ತಿದ್ದು, ಅಧಿಕಾರಿಗಳಿಂದ ಥೀಮ್ ಪಾರ್ಕ್ ನಿರ್ಮಾಣದ ಇಂಚಿಂಚು ಮಾಹಿತಿ ಪಡೆದರು.

ಕಾಮಗಾರಿಯು ಗುಣಮಟ್ಟ ಕಾಪಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ,  ಮುಂದಿನ ನಾಲ್ಕು ತಿಂಗಳಲ್ಲಿ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು.

ಕಾಮಗಾರಿ ವೀಕ್ಷಣೆ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ, ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.vtu

Key words: Minister ,Krishna Byre Gowda, Kempegowda Theme Park

The post ‘ಕೆಂಪೇಗೌಡ ತೀಮ್ ಪಾರ್ಕ್’ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...