30
April, 2026

A News 365Times Venture

30
Thursday
April, 2026

A News 365Times Venture

ಲಾರಿ ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲಿ ದಂಪತಿ ಮತ್ತು ಓರ್ವ ಮಹಿಳೆ ಸಾವು.

Date:

ಮೈಸೂರು,ಜೂನ್,4,2025 (www.justkannada.in): ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ದಂಪತಿ, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಹಂಚೀಪುರ ಗ್ರಾಮದ ಚಿಕ್ಕ ಸ್ವಾಮಿ (45) ಪತ್ನಿ ರೂಪ (38), ‌ ಕಣೇನೂರು ಗ್ರಾಮದ ಚನ್ನಮಲ್ಲಮ್ಮ (55) ಮೃತಪಟ್ಟವರು. ಚಿಕ್ಕಸ್ವಾಮಿ, ಪತ್ನಿ ರೂಪ ಮತ್ತು ಚನ್ನಮಲ್ಲಮ್ಮ ಎಂಬುವವರು ಬೈಕ್ ಹೋಗುತ್ತಿದ್ದಾಗ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ನಂತರ ಬೈಕ್ ಸವಾರ, ಇಬ್ಬರು ಮಹಿಳೆಯರ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಅಪಘಾತಕ್ಕೀಡಾದ ಲಾರಿ ತಮಿಳುನಾಡು ಮೂಲದ್ದಾಗಿದ್ದು ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು. ಈ ಕುರಿತು  ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.vtu

Key words: Accident, couple, woman, died, mysore

The post ಲಾರಿ ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲಿ ದಂಪತಿ ಮತ್ತು ಓರ್ವ ಮಹಿಳೆ ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...