30
June, 2026

A News 365Times Venture

30
Tuesday
June, 2026

A News 365Times Venture

ಕಾಂತಾರ ಚಿತ್ರತಂಡಕ್ಕೆ ಮತ್ತೊಂದು ಶಾಕ್: ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಸಾವು

Date:

ಶಿವಮೊಗ್ಗ,ಜೂನ್,12,2025 (www.justkannada.in): ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಇದೀಗ ಮತ್ತೊಂದು ಶಾಕ್ ಉಂಟಾಗಿದ್ದು, ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

‘ಕಾಂತಾರ: ಚಾಪ್ಟರ್ 1ಸಿನಿಮಾ ಶೂಟಿಂಗ್ ಗಾಗಿ ಆಗಮಿಸಿದ್ದ ಕೇರಳದ ತ್ರಿಶೂರ್ ಮೂಲಕ ವಿಜು ವಿಕೆ ಎಂಬುವವರು ಮೃತಪಟ್ಟವರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟ್​ ಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ.

ಈ ಮೊದಲು ‘ಕಾಂತಾರ: ಚಾಪ್ಟರ್ 1’ ಚಿತ್ರದ ಜೂನಿಯರ್ ಆರ್ಟಿಸ್ಟ್​ ಕಪಿಲ್ ಎಂಬುವವರು ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ತಮ್ಮ ತಂಡದವರ ಜೊತೆ ಈಜಲು ತೆರಳಿದ್ದ ವೇಳೆ ಸಾವನ್ನಪ್ಪಿದ್ದರು. ಮೇ 6ರಂದು ಈ ಘಟನೆ ನಡೆದಿತ್ತು.

ಆ ಬಳಿಕ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಕೂಡ ಮೃತಪಟ್ಟರು. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಇವರು ಪ್ರಮುಖ ಪಾತ್ರ ಮಾಡುತ್ತಿದ್ದರು. ಅವರು ಗೆಳೆಯನ ಮದುವೆಯಲ್ಲಿ ಭಾಗಿಯಾದಾಗ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿದ್ದರು. ಆ ಬಳಿಕ ಕುಸಿದು ಬಿದ್ದರು. ಅವರು ಕೂಡ ಹೃದಯಘಾತದಿಂದ ಮೃತಪಟ್ಟಿದ್ದರು.

ಇದೀಗ ಕೇರಳ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿಕೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.vtu

Key words: Kantara film,  Another, artist ,dies , heart attack

The post ಕಾಂತಾರ ಚಿತ್ರತಂಡಕ್ಕೆ ಮತ್ತೊಂದು ಶಾಕ್: ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ

ಬೆಂಗಳೂರು, ಜೂನ್,29,2026 (www.justkannada.in): ಅಧಿಕೃತ ಮಾಹಿತಿಯ ಅನಧಿಕೃತ ಬಹಿರಂಗಪಡಿಸುವಿಕೆಯನ್ನು ತಡೆಯಲು ಕರ್ನಾಟಕ...

ರೇಷ್ಮೆ ಕೃಷಿಯು ರೈತ ಸಮುದಾಯಕ್ಕೆ ಜೀವನೋಪಾಯವಾಗಿದೆ- ಆಯುಕ್ತೆ ಶಿಲ್ಪಾನಾಗ್

ಮೈಸೂರು,ಜೂನ್,30,2026 (www.justkannada.in): ರೇಷ್ಮೆ ಕೃಷಿಯು ರೈತ ಸಮುದಾಯದ ಜೀವನೋಪಾಯವಾಗಿದೆ ಎಂದು ರೇಷ್ಮೆ...

ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ VTU

ಬೆಂಗಳೂರು,ಜೂನ್,30,2026 (www.justkannada.in): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ...

2028ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜೂನ್,30,2026 (www.justkannada.in): 2028 ರ ವೇಳೆಗೆ ಮಾದಕ ವಸ್ತು ಮುಕ್ತ-...