ಬೆಂಗಳೂರು,ಜೂನ್,17,2025 (www.justkannada.in): ಪಿಎಂಎಲ್ ಎ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. 5 ಲಕ್ಷ ಬಾಂಡ್, ಇಬ್ಬರ ಶೂರಿಟಿ ನೀಡಬೇಕು. ವಿಳಾಸ ಬದಲಾವಣೆ ಮಾಡಬಾರದು. ಬೆಂಗಳೂರು ಬಿಟ್ಟು ಹೋಗಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ.
ಐಶ್ವರ್ಯ ಗೌಡ ಪರ ವಾದ ಮಂಡಿಸಿದ ಎಸ್. ಸುನೀಲ್ ಕುಮಾರ್, ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧಿಸಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಹೇಳಿದರು.
ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಐಶ್ವರ್ಯಗೌಡ ಮೇಲಿದೆ.
Key words: Fraud case, Aishwarya Gowda, conditional bail
The post ವಂಚನೆ ಪ್ರಕರಣ: ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




