4
March, 2026

A News 365Times Venture

4
Wednesday
March, 2026

A News 365Times Venture

ಚಾಮುಂಡಿ ಬೆಟ್ಟದಲ್ಲಿ ರೀಲ್ಸ್ ಬ್ಯಾನ್: ಮೊಬೈಲ್ ಕ್ಯಾಮರಾ ನಿಷೇಧ

Date:

ಮೈಸೂರು,ಜೂನ್,25,2025 (www.justkannada.in): ಆಷಾಢ ಮಾಸ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಹಾಗೂ ಕ್ಯಾಮರಾದಲ್ಲಿ ರೀಲ್ಸ್ ಮಾಡುವುದು ಹಾಗೂ ಫೋಟೋ ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆಷಾಢ ಮಾಸ ಹಿನ್ನೆಲೆಯಲ್ಲಿ ಅಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತದೆ   2025ನೇ ಶ್ರೀ ವಿಶ್ವಾವಸು ನಾಮ ಸಂವತ್ಸರದ ಆಷಾಢ ಶುಕ್ರವಾರಗಳ ಕಾರ್ಯಕ್ರಮ

ಜೂನ್ 27 ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 4 ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 11 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 17 ಗುರುವಾರ ದಂದು ವರ್ಧಂತಿ ಉತ್ಸವ ನೆರವೇರಲಿದ್ದು,  ಜುಲೈ 18 ರಂದು ನಾಲ್ಕನೇ ಆಷಾಢ ಶುಕ್ರವಾರ ಇರಲಿದೆ. ಪ್ರತಿ ಶುಕ್ರವಾರ ಬೆಳಿಗ್ಗೆ ವಿಶೇಷ ಅಭಿಷೇಕ, ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ ಉತ್ಸವ ನೆರವೇರಲಿದ್ದು ನಂತರ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.

ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದಂದು  ಪ್ರಾತಃಕಾಲ 05.30ಕ್ಕೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಮಂಗಳಾರತಿ ಬೆಳಿಗ್ಗೆ 09.30ಕ್ಕೆ ಮಹಾಮಂಗಳಾರತಿ ನಂತರ ಬೆಳಿಗ್ಗೆ 10.30ಕ್ಕೆ ಅಮ್ಮನವರಿಗೆ ಚಿನ್ನದ ಪಲ್ಲಕ್ಕಿ ಉತ್ಸವ ಮಂಟಪೋತ್ಸವ, ಪ್ರಸಾದ ವಿನಿಯೋಗ ರಾತ್ರಿ 08.30ಕ್ಕೆ ಶ್ರೀಯವರಿಗೆ ಉತ್ಸವ ಫಲಪೂಜೆ, ದರ್ಬಾರ್ ಉತ್ಸವ, ಮಂಟಪೋತ್ಸವ, ರಾಷ್ಟ್ರಾಶೀರ್ವಾದ ಜರುಗಲಿದೆ.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಷಾಢ ಶುಕ್ರವಾರದಂದು ಭಕ್ತಾದಿಗಳು ಈ ಕೆಳಗಿನ ಅಂಶಗಳನ್ನ ಗಮನದಲ್ಲಿಟ್ಟುಕೊಳ್ಳಬೇಕು..

ಚಾಮುಂಡೇಶ್ವರಿ ದೇವಾಲಯದಲ್ಲಿ ಉತ್ಸವ ಮೂರ್ತಿ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮರದಲ್ಲಿ ರೀಲ್ಸ್ ಮಾಡುವುದು ಹಾಗೂ ಫೋಟೋ ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಫೋಟೋ & ವಿಡಿಯೋ ಮಾಡಿದ್ದು ಕಂಡುಬಂದಲ್ಲಿ ಮೊಬೈಲ್ /ಕ್ಯಾಮರವನ್ನು ಶಾಶ್ವತವಾಗಿ ವಶಪಡಿಸಿಕೊಳ್ಳಲಾಗುತ್ತದೆ.

ಇನ್ನು ಮುಂದೆ ಪ್ರಾಧಿಕಾರದ ವತಿಯಿಂದಲೇ ಉತ್ಸವ ಮೂರ್ತಿಯ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿ ಮತ್ತು ನೇರಪ್ರಸಾರವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತದೆ.

ಆಷಾಢ ಮಾಸದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ಯಾವುದೇ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. ಆಷಾಢ ಮಾಸದಲ್ಲಿ ಈ ಮೇಲಿನ ದಿನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಲಲಿತ ಮಹಲಿನ ಆವರಣದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವತಿಯಿಂದ ಉಚಿತ ಬಸ್ ಸೇವೆ ಮತ್ತು ವಾಹನ ನಿಲುಗಡೆ ಮಾಡಲಾಗಿದೆ.

ಎಲ್ಲಾ ವಿಶೇಷ ದರ್ಶನದ ಟಿಕೆಟ್ ಗಳನ್ನು ಲಲಿತ ಮಹಲ್ ಆವರಣದಲ್ಲಿ ನೀಡಲಾಗುತ್ತದೆ, ಬೆಟ್ಟದ ಮೇಲೆ ಯಾವುದೇ ವಿಶೇಷ ದರ್ಶನದ ಟಿಕೆಟ್ ಗಳನ್ನು ನೀಡಲಾಗುವುದಿಲ್ಲ.

ಧರ್ಮದರ್ಶನ, 300 ರೂ.  ದರ್ಶನ 2000 ರೂ ದರ್ಶನ ಹೀಗೆ ವಿವಿಧ ಬಗೆಯ ದರ್ಶನದ ವ್ಯವಸ್ಥೆಯನ್ನು ಮಾಡಿ ಇದಕ್ಕೆ ಅನುಗುಣವಾಗುವಂತೆ ಬಸ್‌ ವ್ಯವಸ್ಥೆಯನ್ನು ಸಹ ಮಾಡಿದೆ.vtu

Key words: Chamundi Hills, Reels, banned , Mobile cameras, prohibited

The post ಚಾಮುಂಡಿ ಬೆಟ್ಟದಲ್ಲಿ ರೀಲ್ಸ್ ಬ್ಯಾನ್: ಮೊಬೈಲ್ ಕ್ಯಾಮರಾ ನಿಷೇಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...