28
August, 2026

A News 365Times Venture

28
Friday
August, 2026

A News 365Times Venture

ಕಾಲ್ತುಳಿತ ಕೇಸ್: CAT ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ

Date:

ಬೆಂಗಳೂರು, ಜುಲೈ, 2,2025 (www.justkannada.in): ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ  ಪ್ರಕರಣಕ್ಕೆ ಸಂಬಂಧಿಸಿದಂತೆ  ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT)  ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸರ್ಕಾರದ ಪರ  ಎಜಿ ಶಶಿಕಿರಣ್ ಶೆಟ್ಟಿ, ತುರ್ತು ವಿಚಾರಣೆಗೆ ಮನವಿ ಮಾಡಿದರು.

ಕರ್ನಾಟಕ ಸರ್ಕಾರದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಬಳಿಕ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನ ನಾಳೆಗೆ ನಿಗದಿ ಮಾಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ ದಯಾನಂದ್, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು.

ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯು ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನ ರದ್ದುಪಡಿಸಿತ್ತು.vtu

Key words: Stampede case, Government, High Court, CAT, order

The post ಕಾಲ್ತುಳಿತ ಕೇಸ್: CAT ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...