ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರಿಗೇ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗಲ್ಲದೆ ರಾಜ್ಯದ ಜನರಿಗೂ ವಿಶ್ವಾಸ ಇಲ್ಲ. ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದರು.
15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, . ಯಾರೇ ಮುಖ್ಯಮಂತ್ರಿ ಆದರೂ ರಾಜ್ಯವು ಅಭಿವೃದ್ಧಿ ಕಾಣಲು ಸಾಧ್ಯವಾಗದು. ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದ್ದು, ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬಂದು ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ನಾನಾ ಹೇಳಿಕೆ ಬರುತ್ತಿದೆ. ಹೀಗಾಗಿ ಸಿಎಂ ಮೇಲೆ ಕಾಂಗ್ರೆಸ್ ಶಾಸಕರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತಗುತ್ತದೆ ಎಂದು ಲೇವಡಿ ಮಾಡಿದರು.
Key words: Congress, MLAs, no confidence, CM, BY Vijayendra
The post ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.