ಶಿವಮೊಗ್ಗ,ಜುಲೈ,8,2025 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಯಾವುದೇ ಅನುಮಾನವೇ ಬೇಡ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಬಿ.ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ್ದು ಹೈಕಮಾಂಡ್ ಹಲವು ಹೋರಾಟ ಯಶಸ್ವಿಯಾಗಿ ರೂಪಿಸಿಕೊಂಡು ಬರುತ್ತಿದ್ದಾರೆ ವಿಜಯೇಂದ್ರ ಸಮರ್ಥ ನಾಯಕ ಕಿರಿಯವಯಸ್ಸಿನಲ್ಲಿ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಹೀಗಾಗಿ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ರೀತಿಯ ಅನುಮಾನವೇ ಇಲ್ಲ ಎಂದರು.
ಇದೇ ವೇಳೆ ಕಾಂಗ್ರೆಸ್ ಗೆ ಕುಟುಕಿದ ಎಂ.ಪಿ ರೇಣುಕಾಚಾರ್ಯ, ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಫೈಟ್ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಗೊಂದಲಗಳಿವೆ ರಾಜ್ಯಕ್ಕೆ ರಣದೀಪ ಸಿಂಗ್ ಸುರ್ಜೆವಾಲಾ ಪದೇ ಪದೇ ಬಂದು ಸಭೆ ನಡೆಸುತ್ತಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ, ಈ ಕಾಂಗ್ರೆಸ್ ಸರ್ಕಾರ ಪತನ ಅಷ್ಟೇ ಸತ್ಯ ಎಂದು ಹೇಳಿದರು.
Key words: Vijayendra, continue, BJP, state president, MP Renukacharya
The post ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ, ಯಾವುದೇ ಅನುಮಾನವೇ ಬೇಡ- ಎಂ.ಪಿ ರೇಣುಕಾಚಾರ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.