ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯದಲ್ಲಿ ‘ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಈ ವಿಚಾರವಾಗಿ ಈಗ ಚರ್ಚೆ ಮಾಡಲು ಇದು ಸೂಕ್ತ ಸಮಯ ಅಲ್ಲ ಎಂದು ಸ್ಪಷ್ಟಪಡಿಸಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ. ಪಕ್ಷ ಸಂಘಟನೆ ವಿಚಾರವಾಗಿ ಈ ಸಭೆ ನಡೆಯಲಿದೆ ಎಂದರು.
ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಅವರ ನಾಯಕತ್ವ ಹಾಗೂ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ’ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: CM, Change, DCM, DK Shivakumar
The post ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.