12
July, 2025

A News 365Times Venture

12
Saturday
July, 2025

A News 365Times Venture

ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸ ಮಾಡಿದ್ರೆ ತಕ್ಷಣವೇ ದೂರು ದಾಖಲಿಸಿ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,10,2025 (www.justkannada.in): ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ.

ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಕೂಡ ಹೌದು.

ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದನ್ನು ನಾಡಿನ ನನ್ನ ಎಲ್ಲಾ ತಾಯಂದಿರಿಗೆ, ಅಕ್ಕತಂಗಿಯರಿಗೆ ತಿಳಿಸಲು ಬಯಸುತ್ತೇನೆ.  ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ.

ನಾವು ನೀವೆಲ್ಲರೂ ಜೊತೆಗೂಡಿ ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ.vtu

Key words: dignity, women, complain, CM, Siddaramaiah

The post ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸ ಮಾಡಿದ್ರೆ ತಕ್ಷಣವೇ ದೂರು ದಾಖಲಿಸಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...

ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆಗೆ ಚಿಂತನೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಜುಲೈ,12,2025 (www.justkannada.in): ಸಂಘಟಿತ ಕಾರ್ಮಿಕರಂತೆಯೇ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಿಕೊಡುವ...

ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ

ಚಿಕ್ಕಮಗಳೂರು,ಜುಲೈ,12,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು...