ಬೆಂಗಳೂರು.ಗ್ರಾಮಾಂತರ,ಜುಲೈ,14,2025 (www.justkannada.in): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ ಅದಕ್ಕಾಗಿ ಅರ್ಹ ನೇಕಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು, ಕಾರ್ಮಿಕರುಗಳು ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ. ಕೆಐಎಡಿಬಿ ಅಪೇರಲ್ ಪಾರ್ಕ್. ದೊಡ್ಡಬಳ್ಳಾಪುರ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಜುಲೈ 25 ರೊಳಗೆ ಕಛೇರಿ ವಿಳಾಸಕ್ಕೆ ಸಲ್ಲಿಸಬೇಕು.
ಈಗಾಗಲೇ 2024-25 ನೇ ಸಾಲಿನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು, ಕಾರ್ಮಿಕರು ಮತ್ತೊಮ್ಮೆ ಅರ್ಜಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಕೈಮಗ್ಗ ಮತ್ತು ಜವಳಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Handloom, power loom, weavers, apply, subsidy
The post ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರೇ ಸಹಾಯಧನಕ್ಕೆ ಅರ್ಜಿ ಸಲ್ಲಿಸಿ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.