ನವದೆಹಲಿ,ಜುಲೈ,17,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಜಾಮೀನು ರದ್ದುಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜುಲೈ 22 ಕ್ಕೆ ಮುಂದೂಡಿದೆ.
ನಟ ದರ್ಶನ್ ಸೇರಿ 6 ಆರೋಪಿಗಳ ಜಾಮೀನು ರದ್ದುಕೋರಿ ರಾಜ್ಯ ಸರ್ಕಾರ ಸಲ್ಲಿರುವ ಅರ್ಜಿಯನ್ನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಏಕೆ ದರ್ಶನ್ ಜಾಮೀನು ರದ್ದು ಮಾಡಬಾರದು..? ಹೇಳಿ ಎಂದು ದರ್ಶನ್ ಪರ ವಕೀಲ ಕಪಿಲ್ ಸಿಬಲ್ ಗೆ ಪ್ರಶ್ನೆ ಮಾಡಿತು. ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲ ಎಂದು ದರ್ಶನ್ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಕಪಿಲ್ ಸಿಬಲ್ ವಾದವನ್ನು ಒಪ್ಪದ ಸುಪ್ರೀಂಕೋರ್ಟ್ ವಿಚಾರಣೆಯನ್ನ ಜುಲೈ 22ಕ್ಕೆ ಮುಂದೂಡಿಕೆ ಮಾಡಿತು.
ನಟ ದರ್ಶನ್ ಪರ ವಕೀಲರ ಬದಲಾವಣೆ
ನಟ ದರ್ಶನ್ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದರು. ಆದರೆ ಇದೀಗ ಇವರು ಪ್ರಕರಣದಿಂದ ಹಿಂದೆ ಸರಿದಿದ್ದು ಕಪಿಲ್ ಸಿಬಲ್ ಅವರು ನಟ ದರ್ಶನ್ ಪರ ವಾದಮಂಡಿಸುತ್ತಿದ್ದಾರೆ.
ರೇಣುಕಾಸ್ವಾಮಿ ಬರ್ಬರ ಹತ್ಯೆ ಕೇಸ್ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಬಂಧನಕ್ಕೆ ಒಳಗಾಗಿ ಆರು ತಿಂಗಳ ಕಾಲ 17 ಆರೋಪಿಗಳು ಜೈಲಿನಲ್ಲಿದ್ದರು. ಆ ನಂತರ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಈ ಪೈಕಿ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
Key words: Renukaswamy, Murder case, actor, Darshan, bail, cancellation, Supreme court
The post ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.