27
September, 2026

A News 365Times Venture

27
Sunday
September, 2026

A News 365Times Venture

ಸಿಎಂ ವಿರುದ್ದ ED ಸಂಸ್ಥೆ ದುರ್ಬಳಕೆ: ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ- ಸಚಿವ ಡಾ.ಹೆಚ್ ಸಿ ಮಹದೇವಪ್ಪ

Date:

ಮೈಸೂರು,ಜುಲೈ,21,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ED ಸಂಸ್ಥೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ ಎಂದು ಸಚಿವ ಡಾ.ಹೆಚ್ ಸಿ ಮಹದೇವಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್ ಸಿ ಮಹದೇವಪ್ಪ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿಷಯದಲ್ಲಿ ರಾಜಕೀಯ ಪ್ರೇರಿತವಾಗಿ ನಡೆದುಕೊಳ್ಳುತ್ತಿದ್ದ ED ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಛಾಟಿ ಬೀಸಿದ್ದು, ಚುನಾವಣೆಗಳು ಚುನಾವಣಾ ಕಣದಲ್ಲಿ ನಡೆಯಲಿ, ನೀವು ರಾಜಕೀಯ ದಾಳವಾಗಿ ಬಳಕೆ ಆಗಬೇಡಿ. ನಾವು ಮಾತನಾಡಲು ಆರಂಭಿಸಿದರೆ ED ಸಂಸ್ಥೆಯ ವಿರುದ್ಧ ಬಹಳ ಕಟುವಾಗಿ ಮಾತನಾಡಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಇಂತಹ ಘಟನೆಗಳನ್ನು ನಾವು ಕಂಡಿದ್ದೇವೆ. ED ಸಂಸ್ಥೆಯು ದೇಶಾದ್ಯಂತ ಈ ರೀತಿಯ ಕೆಟ್ಟ ಪ್ರವೃತ್ತಿ ಹರಡುವುದನ್ನು ನಾವು ಸಹಿಸುವುದಿಲ್ಲ ಎಂದು ED ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ.

ಈ ಮೂಲಕ ಬಿಜೆಪಿಗರು ವಿಪಕ್ಷಗಳನ್ನು ತೇಜೋವಧೆ ಮಾಡಲು ED ಯಂತಹ ತನಿಖಾ ಸಂಸ್ಥೆಗಳನ್ನು ದಾಳವಾಗಿ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದ್ದು ಇಂತಹ ಹೀನ ರಾಜಕೀಯ ಕೃತ್ಯ ಮಾಡಿದ್ದಕ್ಕಾಗಿ ಅವರು ರಾಜ್ಯದ ಜನರ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಒತ್ತಾಯಿಸಿದ್ದಾರೆ.

ಇನ್ನು ರಾಜಕೀಯದ ಹಿಡಿತಕ್ಕೆ ಒಳಗಾಗದೇ ಸ್ವತಂತ್ರ ತನಿಖಾ ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನು ಸೂಕ್ತವಾಗಿ ನಿರ್ವಹಿಸಿ ಸಂಸ್ಥೆಗಳ ಘನತೆಯನ್ನು ಮತ್ತು ಅದರ ಮಹತ್ವವನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದು ಈ ವೇಳೆ ಆಗ್ರಹಿಸುತ್ತೇನೆ. ದೇಶದ ಸರ್ವೋಚ್ಛ ಅಂಗವಾದ ನ್ಯಾಯಾಂಗವೇ ED ಸಂಸ್ಥೆಯ ಅಧಿಕಾರ ದುರ್ಬಳಕೆ ವಿಷಯದಲ್ಲಿ ದನಿ ಎತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಆಗಿದ್ದು ಇದನ್ನು ನಾನು ಮನದುಂಬಿ ಸ್ವಾಗತಿಸುತ್ತೇನೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.vtu

Key words: ED,  BJP,  apologies, Minister, Dr HC Mahadevappa

The post ಸಿಎಂ ವಿರುದ್ದ ED ಸಂಸ್ಥೆ ದುರ್ಬಳಕೆ: ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ- ಸಚಿವ ಡಾ.ಹೆಚ್ ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೌಢ್ಯ ವಿರೋಧಿ ಕಾಯ್ದೆ ಜಾರಿಗೆ ಪಟ್ಟಭದ್ರ ಹಿತಾಸಕ್ತಿಗಳಿಂದ ಅಡ್ಡಿ: ಸಿದ್ದರಾಮಯ್ಯ

  ಮೈಸೂರು, ಸೆ.27, 2026: ಸಮಾಜದಲ್ಲಿ ಮೌಢ್ಯ, ಕಂದಾಚಾರ ಹಾಗೂ ಅವೈಜ್ಞಾನಿಕ ಆಚರಣೆಗಳು...

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಆರೋಪ

  ಬೆಂಗಳೂರು, ಜೂ.27, 2026: ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಯಲ್ಲಿ ಪ್ರಮುಖ...

ಮೇಜರ್ ಮಣಿವಣ್ಣನ್ ಅವರಿಗೆ ಚೀಪ್ ಆಫ್ ಡಿಫೆನ್ಸ್ ಸ್ಟಾಫ್ ಅವರಿಂದ ಪ್ರಶಂಸಾ ಪತ್ರ

  ಬೆಂಗಳೂರು ಸೆ.೨೬,೨೦೨೬: ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ...

ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ:  ಚು.ಆಯೋಗ ವಿಸರ್ಜಿಸಿ, ಮುಖ್ಯಆಯುಕ್ತರನ್ನ ಬಂಧಿಸಿಬೇಕು-ಸಿಎಂ ಡಿಕೆಶಿ ಒತ್ತಾಯ

ಬೆಂಗಳೂರು ,ಸೆಪ್ಟಂಬರ್,26,2026 (www.justkannada.in): ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಚುನಾವಣಾ ಆಯೋಗವನ್ನು ವಿಸರ್ಜಿಸಬೇಕು. ಮುಖ್ಯ...