ಬೆಂಗಳೂರು,ಜುಲೈ,24,2025 (www.justkannada.in): ರಾಜ್ಯ ಸರ್ಕಾರ ಮರು ಜಾತಿಗಣತಿ ಸಮೀಕ್ಷೆಗೆ ಮುಂದಾಗಿದ್ದು ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಜಾತಿಗಳ ನಡುವೆ ಕಂದಕ ತರಲು ಜಾತಿ ಗಣತಿ ಮಾಡಿಸಿದ್ದಾರೆ. ಈಗ ಹೊಸ ಜಾತಿ ಗಣತಿ ಸಮೀಕ್ಷೆ ಮಾಡಿಸಲು ಮುಂದಾಗಿದ್ದಾರೆ. ಇದರ ಅರ್ಥ ಈ ಹಿಂದಿನ ಗಣತಿ ಬೋಗಸ್ ಎಂದರ್ಥವಾಗುತ್ತದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಇನ್ನು ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಲೋಕಸಭೆ ಕಲಾಪದಲ್ಲಿ ವಿಪಕ್ಷಗಳ ಗದ್ದಲ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ನಮ್ಮ ಪಕ್ಷದ ಎಲ್ಲ ಸಂಸದರು ರಾಜ್ಯದ ನೆಲ, ಜಲ ವಿಚಾರವಾಗಿ ಮಾತಾಡುತ್ತಾರೆ. ರಾಜ್ಯ ಸರ್ಕಾರ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು. ಆದರೆ ಇದೇ ಸರ್ಕಾರದ ಪಕ್ಷದ ನಾಯಕರು ಸಂಸತ್ತಿನಲ್ಲಿ ಎಲ್ಲದಕ್ಕೂ ಸಭಾತ್ಯಾಗ ಮಾಡುತ್ತಾರೆ. ಸಂಸತ್ತಿನಲ್ಲಿ ರಾಜ್ಯದ ವಿಷಯವನ್ನು ಚರ್ಚೆ ಮಾಡಲು ಮುಂದಾಗಲ್ಲ ಎಂದು ಆಕ್ಷೇಪಿಸಿದರು.
Key words: Re-caste census, Government, R. Ashok
The post ಮರು ಜಾತಿಗಣತಿ: ಜಾತಿಗಳ ನಡುವೆ ಕಂದಕವನ್ನುಂಟು ಮಾಡಿ ಬೇಳೆ ಬೇಯಿಸಿಕೊಳ್ಳಲು ಹುನ್ನಾರ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.