30
April, 2026

A News 365Times Venture

30
Thursday
April, 2026

A News 365Times Venture

10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ: ಯಾವುದೇ ಕೊರತೆ ಇಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

Date:

ಬೆಂಗಳೂರು ಗ್ರಾಮಾಂತರ, ಆಗಸ್ಟ್, 01,2025 (www.justkannada.in): ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ. ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಹೊಸಕೋಟೆ ಟೌನ್ ನಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರಕ್ಕೆ ಎಸ್ಪಿ ಸಿ.ಕೆ ಬಾಬಾ ಅವರೊಂದಿಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿ ನಂತರ ಮಾತನಾಡಿದ  ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಆಗಸ್ಟ್ ಮಾಹೆಯಲ್ಲಿ ನಮಗೆ 5559 ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದ್ದು, 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ಅದರಲ್ಲಿ 1716.68 ಮೆ.ಟನ್ ಯೂರಿಯಾ, 1834.7 ಮೆ.ಟನ್ ಡಿಎಪಿ, 756.5 ಮೆ.ಟನ್ ಎಂಒಪಿ, 5358.4 ಮೆ.ಟನ್ ಎನ್ಪಿಕೆಎಸ್(ಕಾಂಪ್ಲೆಕ್ಸ್), 498.9 ಮೆ.ಟನ್ ಎಸ್.ಎಸ್.ಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.

ರೈತರು ಆತಂಕ ಪಡುವ ಅಗತ್ಯವಿಲ್ಲ. ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಲಭ್ಯವಿದ್ದು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು. ಹಾಗೇಯೇ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಯಾರಾದರೂ ಮಾರಟ ಮಾಡುವುದು ಕಂಡುಬಂದಲ್ಲಿ ನಮ್ಮ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಪ್ಪ, ಕೃಷಿ ಅಧಿಕಾರಿ ರಾಮಾಂಜಿನಯ್ಯ, ಇತರೆ ಅಧಿಕಾರಿಗಳು ಇದ್ದರು.vtu

Key words: fertilizer, available, No shortage, DC, AB Basavaraju

The post 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ: ಯಾವುದೇ ಕೊರತೆ ಇಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....