17
February, 2026

A News 365Times Venture

17
Tuesday
February, 2026

A News 365Times Venture

ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರಿಗೆ ನೋಟಿಸ್

Date:

ಬೆಂಗಳೂರು.ಆಗಸ್ಟ್,6,2025 (www.justkannada.in):  ನಿನ್ನೆ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನಿನ್ನೆಯೇ ಇಲಾಖೆ ವಾಟ್ಸಪ್ ಮೂಲಕ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ಇದೀಗ ಸಾರಿಗೆ ಇಲಾಖೆ ಶಾಕ್ ನೀಡಿದ್ದು ನೋಟಿಸ್ ಜಾರಿಗೊಳಿಸಿದೆ. ಹಾಗೆಯೇ ಇಂದು ಹ್ಯಾಂಡ್ ನೋಟಿಸ್ ನೀಡಲು ಮುಂದಾಗಿದೆ. ಇಂದಿನಿಂದ ಸಸ್ಪೆಂಡ್ ಮತ್ತು ನಾಳೆಯಿಂದ ಡಿಸ್ಮಿಸ್ ಮಾಡಲು ಪ್ಲಾನ್ ರೂಪಿಸಿದೆ ಎನ್ನಲಾಗಿದೆ.

38 ತಿಂಗಳ ಬಾಕಿವೇತನ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಿನ್ನೆ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದರು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಷ್ಕರಕ್ಕೆ ಎರಡು ದಿನಗಳ ತಡೆಯಾಜ್ಞೆ ನೀಡಿದೆ. ಅಲ್ಲದೆ ಸಾರಿಗೆ ಸಂಘಟನೆಗಳಿಗೆ ನೋಟಿಸ್ ನೀಡಿದೆ.

Key words: Notice , transport, employees, strike

The post ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರಿಗೆ ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ- ಸಚಿವ ಎಂ.ಬಿ ಪಾಟೀಲ್

ಕೋಲಾರ,ಫೆಬ್ರವರಿ,17,2026 (www.justkannada.in): ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ...

ಪಿ.ರಾಮಯ್ಯ ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು: ಕೆ.ವಿ.ಪ್ರಭಾಕರ್ ಶ್ಲಾಘನೆ

ಬೆಂಗಳೂರು ಫೆಬ್ರವರಿ,17,2026 (www.justkannada.in): ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ...

ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ ಬಗ್ಗೆ...

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು,ಫೆಬ್ರವರಿ,17,2026 (www.justkannada.in): ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ದ ಅಪಪ್ರಚಾರ ಪ್ರಕರಣಕ್ಕೆ...