17
February, 2026

A News 365Times Venture

17
Tuesday
February, 2026

A News 365Times Venture

ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅವಕಾಶ, ಅದೃಷ್ಟ ಇಲ್ಲ- ಬಸವರಾಜ ರಾಯರೆಡ್ಡಿ

Date:

ಯಾದಗಿರಿ,ಆಗಸ್ಟ್,6,2025 (www.justkannada.in):  ನನ್ನ ಜತೆಗೆ ಶಾಸಕರಾದವರು  ಸಿಎಂ, ಡಿಸಿಎಂ ಮತ್ತು ಮಂತ್ರಿಗಳಾಗಿದ್ದಾರೆ. ಆದರೆ, ನನಗೆ ಅವಕಾಶ ಮತ್ತು ಅದೃಷ್ಟವಿಲ್ಲ  ಶಾಸಕ ಬಸವರಾಜ ರಾಯರೆಡ್ಡಿ  ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಶಾಸಕ ಬಸವರಾಜ ರಾಯರೆಡ್ಡಿ, 1985ರಲ್ಲಿ ನನ್ನ ಜತೆಗೆ ಶಾಸಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು, ಜಿ. ಪರಮೇಶ್ವರ್  ಡಿಸಿಎಂ, ಮಂತ್ರಿಯಾದರು. ಆದರೆ ನನಗೆ ಅದೃಷ್ಟ ಇಲ್ಲ ಎಂದರು.

ಕಾಂಗ್ರೆಸ್ ಕಟ್ಟುವಲ್ಲಿ ಪ್ರಮುಖರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿಲ್ಲ. ನನಗೂ ಅದೃಷ್ಟ ಮತ್ತು ಅವಕಾಶ ಇಲ್ಲದ್ದಕ್ಕೆ ಸಿಎಂ ಆರ್ಥಿಕ ಸಲಹೆಗಾರ ಹುದ್ದೆಗೆ ಸಂತೋಷಪಡಬೇಕಾಗಿದೆ. ಎಲ್ಲವನ್ನೂ ಸಮಯ ಮತ್ತು ಸಂದರ್ಭ ನಿರ್ಧರಿಸುತ್ತದೆ ಎಂದರು.

ರಾಜಕಾರಣದಲ್ಲಿ ನನ್ನನ್ನು ನಂಬಿದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

Key words: MLAs, CM, DCM, no opportunity, Basavaraja Rayareddy

The post ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅವಕಾಶ, ಅದೃಷ್ಟ ಇಲ್ಲ- ಬಸವರಾಜ ರಾಯರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ- ಸಚಿವ ಎಂ.ಬಿ ಪಾಟೀಲ್

ಕೋಲಾರ,ಫೆಬ್ರವರಿ,17,2026 (www.justkannada.in): ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ...

ಪಿ.ರಾಮಯ್ಯ ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು: ಕೆ.ವಿ.ಪ್ರಭಾಕರ್ ಶ್ಲಾಘನೆ

ಬೆಂಗಳೂರು ಫೆಬ್ರವರಿ,17,2026 (www.justkannada.in): ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ...

ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ ಬಗ್ಗೆ...

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು,ಫೆಬ್ರವರಿ,17,2026 (www.justkannada.in): ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ದ ಅಪಪ್ರಚಾರ ಪ್ರಕರಣಕ್ಕೆ...