10
November, 2025

A News 365Times Venture

10
Monday
November, 2025

A News 365Times Venture

2047ಕ್ಕೆ ವಾರ್ಷಿಕ 500 ದಶಲಕ್ಷ ಟನ್‌ ಉಕ್ಕು ಉತ್ಪಾದನೆ ಗುರಿ; ಕೇಂದ್ರ ಸಚಿವ ಹೆಚ್.ಡಿಕೆ

Date:

ನವದೆಹಲಿ,ಆಗಸ್ಟ್,13,2025 (www.justkannada.in):  ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು, 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು.

ಭಾರತದ ಉಕ್ಕು ವಲಯದ ಒಟ್ಟು ಉತ್ಪಾದನೆಯ ಶೇ.50ರಷ್ಟನ್ನು ಉತ್ಪಾದಿಸುತ್ತಿರುವ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ ಎಂದ ಅವರು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಈ ವಲಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಣ್ಣ ಗಾತ್ರದ ಉಕ್ಕು ವಲಯವು ಕೇವಲ ಒಂದು ಉದ್ಯಮವಲ್ಲ. ಇದು ದೇಶಿಯ ಕೈಗಾರಿಕೀಕರಣದ ಬೆನ್ನೆಲುಬು. ಇದು ಸ್ಥಳೀಯ ಆರ್ಥಿಕತೆಗೆ ಶಕ್ತಿ ನೀಡುತ್ತಿದೆ ಹಾಗೂ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ. ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡುತ್ತಿರುವುದು ಮಾತ್ರವಲ್ಲದೆ, ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಭಾರತವನ್ನು ಶೂನ್ಯ ಇಂಗಾಲ ಬಿಡುಗಡೆ ಹಾಗೂ ಉಕ್ಕು ವಲಯದಲ್ಲಿ ಜಾಗತಿಕ ಸುಸ್ಥಿರ ರಾಷ್ಟ್ರವನ್ನಾಗಿ ಹೊರಹೊಮ್ಮಿಸಲು ನಾವು ದೃಢನಿಶ್ಚಯ ಮಾಡಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿಕೆ ಒತ್ತಿ ಹೇಳಿದರು.

2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್‌ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವುದು ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಹೆಗ್ಗುರಿ ಆಗಿದೆ. ಈ ಮೈಲಿಗಲ್ಲುಗಳನ್ನು ಸಾಧಿಸುವಲ್ಲಿ ಸಣ್ಣ ಗಾತ್ರದ ಉಕ್ಕು ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.

ವಿಶೇಷ ಉಕ್ಕಿಗಾಗಿ PLI ಯೋಜನೆ, ಹಸಿರು ಉಕ್ಕು ಪ್ರಮಾಣೀಕರಣ ರೇಟಿಂಗ್ ವ್ಯವಸ್ಥೆ, ಹೈಡ್ರೋಜನ್ ಆಧರಿತ ಉಕ್ಕು ತಯಾರಿಕೆ ಯೋಜನೆಗಳು ಮತ್ತು ಉಕ್ಕಿನ ಸ್ಕ್ರ್ಯಾಪ್ ಮರುಬಳಕೆ ನೀತಿ ಸೇರಿದಂತೆ ಪ್ರಮುಖ ಉಪಕ್ರಮಗಳನ್ನು ಸರಕಾರವು ಕೈಗೊಂಡಿದೆ ಎಂದು ಹೆಚ್ ಡಿಕೆ ಅವರು ವಿವರಿಸಿದರು.

ಸರಕಾರದ ಪೂರ್ವಭಾವಿ ಕ್ರಮಗಳ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು,”ಇಂಧನ ದಕ್ಷತೆಯು ಇನ್ನು ಮುಂದೆ ಐಚ್ಛಿಕವಲ್ಲ. ತ್ಯಾಜ್ಯ ಶಾಖ ಹೆಚ್ಚಳ, ಆತ್ಯಾಧುನಿಕ ಮಾಲಿನ್ಯ ನಿಯಂತ್ರಣ ವ್ಯವಸ್ಥೆ ಮತ್ತು ನವೀಕರಿಸಬಹುದಾದ ಇಂಧನ ಏಕೀಕರಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಲ್ಲಿ ನಾವು ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳನ್ನು (MSME) ಉತ್ತೇಜಿಸುತ್ತೇವೆ ಎಂದು ಸಚಿವ ಹೆಚ್.ಡಿಕೆ ನುಡಿದರು.

“ಮನೆ, ಬೃಹತ್‌ ಕಟ್ಟಡ, ಹೆದ್ದಾರಿ, ಸೇತುವೆ, ರೇಲ್ವೆ, ವಿಮಾನ, ರಾಕೆಟ್‌ ಸೇರಿದಂತೆ ರಾಷ್ಟ್ರದ ಭವ್ಯ ಇತಿಹಾಸವನ್ನು ನಿರ್ಮಿಸುವ ಉಕ್ಕು ಕ್ಷೇತ್ರವನ್ನು ನಾವು ಮತ್ತಷ್ಟು ಸಶಕ್ತಗೊಳಿಸಬೇಕಿದೆ. ನೀತಿ, ಉದ್ದೇಶ ಮತ್ತು ನಮ್ಮ ಜನರ ಉತ್ಸಾಹದೊಂದಿಗೆ ನಾವು ಭಾರತವನ್ನು ಜಾಗತಿಕ ಉಕ್ಕಿನ ಶಕ್ತಿ ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ಸಚಿವ ಹೆಚ್.ಡಿ ಕುಮಾರಸ್ವಾಮಿ ಪಣ ತೊಟ್ಟರು.

ಇದೇ ವೇಳೆ ಜಾಗತಿಕವಾಗಿ ಭಾರತದ ಉಕ್ಕು ಉದ್ಯಮಕ್ಕೆ ಏಕೀಕೃತ ಗುರುತನ್ನು ಸಂಕೇತಿಸುವ ಭಾರತ್‌ ಸ್ಟೀಲ್ ಲೋಗೋ ಮತ್ತು ಭಾರತ್ ಸ್ಟೀಲ್ ಅಂತರ್ಜಾಲ ತಾಣವನ್ನು ಅನಾವರಣಗೊಳಿಸಿದ ಸಚಿವ ಹೆಚ್.ಡಿಕೆ, ಉಕ್ಕು ಉತ್ಪಾದನೆಯಲ್ಲಿ ಇಂಗಾಲ ಹೊರಸೂವಿಕೆಯನ್ನು ಕನಿಷ್ಠ ಮಟ್ಟಕ್ಕೆ ತಂದಿರುವ ಹಾಗೂ ಉಕ್ಕು ಉತ್ಪಾದನಾ ಮಾನದಂಡಗಳ ಗುರಿಯನ್ನು  ಸಾಧಿಸಿದ ಉದ್ಯಮದ ನಾಯಕರಿಗೆ ಗೌರವಿಸಿದರು.

Key words:  target, 500 million, tones,, steel production, 2047, Union Minister, HDK

 

The post 2047ಕ್ಕೆ ವಾರ್ಷಿಕ 500 ದಶಲಕ್ಷ ಟನ್‌ ಉಕ್ಕು ಉತ್ಪಾದನೆ ಗುರಿ; ಕೇಂದ್ರ ಸಚಿವ ಹೆಚ್.ಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...