ಬೆಂಗಳೂರು,ಆಗಸ್ಟ್,14,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ್ದು ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಿವಾಸದಲ್ಲಿ ನಟ ದರ್ಶನ್ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ನಾಗೇಶ್ ಹಾಗೂ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಟ ದರ್ಶನ್ ತಮಿಳುನಾಡಿಗೆ ತೆರಳಿದ್ದ ನಟ ದರ್ಶನ್ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ ಪತ್ನಿ ವಿಜಯಲಕ್ಷ್ಮೀ ಅವರ ಹೊಸಕೆರೆಹಳ್ಳಿಯ ಮನೆಗೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ.
ಇನ್ನು ಈಗಾಗಲೇ ಮೊದಲ ಆರೋಪಿ ಪವಿತ್ರಾ ಗೌಡರನ್ನ ಗೋವಿಂದರಾಜನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದೊಯ್ದು ನಂತರ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.
Key words: Bail, canceled, A2, actor, Darshan, arrested
The post ಜಾಮೀನು ರದ್ದು: A2 ನಟ ದರ್ಶನ್ ಬಂಧಿಸಿದ ಪೊಲೀಸರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




