ಬೆಂಗಳೂರು, ಆಗಸ್ಟ್ 15,2025 (www.justkannada.in): ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿ 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ.
10 ವರ್ಷದ ಮುಬಾರಕ್ ಮೃತಪಟ್ಟ ಬಾಲಕ ಕಸ್ತೂರಮ್ಮ, ಸರಸಮ್ಮ ಸೇರಿ 12 ಜನರಿಗೆ ಗಾಯಗಳಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಇಂಧಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳು ಕಸ್ತೂರಿ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು . ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Cylinder, explosion, home, 10-year-old, boy, dies
The post ಮನೆಯಲ್ಲಿ ಸಿಲಿಂಡರ್ ಸ್ಪೋಟ: 10 ವರ್ಷದ ಬಾಲಕ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




