ಮಂಗಳೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನ ಪತ್ತೆ ಹಚ್ಚುವ ಸಲುವಾಗಿ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪ್ರಕರಣ ಕುರಿತು ಎಸ್ ಐಟಿ ತಂಡ ತನಿಖೆ ನಡೆಸುತ್ತಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಲಿದ್ದಾರೆ . ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಸೇರಿದಂತೆ ಸತ್ಯವನ್ನು ಪತ್ತೆ ಹಚ್ಚಲು ಎಸ್ ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ ಎಂದರು.
ಸತ್ಯಾಂಶ ಹೊರಬರಬೇಕು ಎಂಬುದೇ ಎಸ್ ಐಟಿ ರಚನೆ ಉದ್ದೇಶ. ತನಿಖೆ ಸಮರ್ಪಕವಾಗಿ ನಡೆಯುತ್ತಿದ್ದು, ಯಾರಿಗೂ ತನಿಖೆ ಬಗ್ಗೆ ಅನುಮಾನವಿಲ್ಲ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ. ಇದರ ಹಿಂದೆ ಷಡ್ಯಂತ್ರ ಇದ್ದರೆ ಅದನ್ನೂ ಪರಿಗಣಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
Key words: Dharmasthala case, truth, Minister, Dinesh Gundu Rao
The post ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.