18
March, 2026

A News 365Times Venture

18
Wednesday
March, 2026

A News 365Times Venture

ಧರ್ಮಸ್ಥಳ ಕೇಸ್:  ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಚಿಂತನೆ –ಡಿಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು, ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ  ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ಆತ್ಮವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ ಎಂಬ ವಿಶ್ವಾಸವಿದೆ. ಈ ಪ್ರಕರಣ ಕುರಿತು ಗೃಹ ಸಚಿವರು ಅಧಿವೇಶನದಲ್ಲಿ ಉತ್ತರ ನೀಡುತ್ತಾರೆ ಎಂದರು.

ಮುಖ್ಯಮಂತ್ರಿಗಳಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರೂ ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಸಿಎಂ ನಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Dharmasthala case, action, DCM, D.K. Shivakumar

The post ಧರ್ಮಸ್ಥಳ ಕೇಸ್:  ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಚಿಂತನೆ –ಡಿಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು ಒಂದು...

ಮಾ.22 ರಂದು ‘ಡಿವಿಜಿ ಪ್ರಶಸ್ತಿ’ ಮತ್ತು ‘ಬಿಜಿಎಲ್ ಸ್ವಾಮಿ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮಾರ್ಚ್,18,2026 (www.justkannada.in): ಡಿವಿಜಿ ಬಳಗ ಪ್ರತಿಷ್ಠಾನದ ವತಿಯಿಂದ ಹಿರಿಯ ವಿಜ್ಞಾನಿ ಲೇಖಕ...

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ...

 ‘ಸೌದೆ ಬೇಡ, ಗ್ಯಾಸ್ ಬೇಕು’ ಚಳವಳಿ: ಹೆದ್ದಾರಿ ತಡೆದು ಪ್ರತಿಭಟನೆಗೆ ವಾಟಾಳ್ ನಾಗರಾಜ್ ಕರೆ

ಬೆಂಗಳೂರು,ಮಾರ್ಚ್,17,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು...