ಮೈಸೂರು,ಫೆಬ್ರವರಿ,7,2026 (www.justkannada.in): 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್, ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈ ಹಿಂದೆಯೂ ನಾನು ಹೇಳಿದ್ದೇನೆ. ಜನ ನಮಗೆ ಅರ್ಶಿವಾದ ನೀಡಿದ್ದಾರೆ. 136 ಶಾಸಕರು ಗೆದ್ದಿದ್ದಾರೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಮ್ಮ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದೆ. ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಯತೀಂದ್ರ ಅವರೇ ಹೇಳಿಕೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಡಿಕೆಶಿ ಹೇಳಿಕೆಗೆ ಸಮರ್ಥಿಸುತ್ತೇನೆ ಎಂದರು.
ಯತೀಂದ್ರ ಸಿದ್ದರಾಮಯ್ಯ ವರಿಷ್ಠರ ರೀತಿ ವರ್ತನೆಮಾಡುತ್ತಿದ್ದಾರೆ ಎನ್ನುವ ವಿಚಾರ. ನಾನು ಡಿಕೆಶಿ ಅವರ ಹೇಳಿಕೆಯನ್ನು ಸಮ್ಮತಿಯಿದೆ ಎಂದರು.
ಸಂಪುಟ ಪುನರ್ ರಚನೆ ವಿಳಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ತನ್ವೀರ್ ಸೇಠ್, ಜನವರಿಯಲ್ಲಿ ಆಗತ್ತೆ ಅಂತಿದ್ದರು. ಯಾವ ಜನವರಿ ಅಂತ ಹೇಳಿಲ್ಲ ಮಾರ್ಮಿಕವಾಗಿ ನುಡಿದರು.
ಯತೀಂದ್ರ ಹಸ್ತಕ್ಷೇಪ ಜಾಸ್ತಿ ಎನ್ನುವ ವಿಚಾರ ಕುರಿತು ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ಕೇವಲ ನನ್ನ ಕ್ಷೇತ್ರವಲ್ಲ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಹಸ್ತಕ್ಷೇಪ ನಡೆಯುತ್ತಿದೆ ಅಂತ ಹೇಳುತ್ತಾರೆ. ಸಮಯ ಬಂದಾಗ ಅದನ್ನು ಹೇಳುತ್ತೇನೆ. ಕೆಲವು ಅಧಿಕಾರಿಗಳು ಶಂಖದಿಂದ ಬಂದರೇ ತೀರ್ಥ ಎನ್ನುವ ರೀತಿ ವರ್ತನೆ ಮಾಡುತ್ತಿದ್ದಾರೆ. ನಾವು ಕೂಡ ಶಂಕ ಊದುವ ಕೆಲಸ ಮಾಡುತ್ತೇವೆ ಎನ್ನುವ ಮೂಲಕ ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿರುದ್ಧ ತನ್ವೀರ್ ಸೇಠ್ ಕಿಡಿ ಕಾರಿದರು.
Key words: Yatindra, statement, CM, 5 years, MLA, Tanveer Sait
The post ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂಬ ಯತೀಂದ್ರ ಹೇಳಿಕೆ: ಶಾಸಕ ತನ್ವೀರ್ ಸೇಠ್ ಪರೋಕ್ಷ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




