21
February, 2026

A News 365Times Venture

21
Saturday
February, 2026

A News 365Times Venture

ಕಲ್ಲು ತೂರಾಟ ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿರುವ ಸಿಎಂ ಸಿದ್ದರಾಮಯ್ಯ, ಘಟನೆಗೆ ಕಾರಣರಾದ ಪುಂಡರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Key words: stone-pelting, Bagalakote, CM Siddaramaiah

The post ಕಲ್ಲು ತೂರಾಟ ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...