ಬೆಂಗಳೂರು,ಫೆಬ್ರವರಿ,25,2026 (www.justkannada.in): ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಶಾಕ್ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಉದ್ಯೋಗ ಕೊಡಬೇಕೆನ್ನೋದು ನಮ್ಮ ಭರವಸೆ. ಬಜೆಟ್ ನಲ್ಲಿ ಈ ಬಗ್ಗೆ ನಾನು ಘೋಷಣೆ ಮಾಡುತ್ತೇನೆ. ಹಂತ ಹಂತವಾಗಿ ನಾವು ಖಾಲಿ ಹುದ್ದೆಗಳ ಭರ್ತಿ ಮಾಡುತ್ತೇವೆ. ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ ಎಂದರು.
Key words: CM Siddaramaiah, ministerial post, first-time, MLAs
The post ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




