ಬೆಂಗಳೂರು, ಮಾರ್ಚ್,5, 2026 (www.justkannada.in): ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ.
ರಾಜ್ಯ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ನಡೆಯಲಿದ್ದು, ಒಟ್ಟು 14 ದಿನಗಳ ಕಾಲ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಚರ್ಚೆಗಳು ನಡೆಯಲಿವೆ. ನಾಳೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಬಜೆಟ್ ಮಂಡನೆಯ ಬಳಿಕ ವಿವಿಧ ಇಲಾಖೆಗಳ ಅನುದಾನಗಳ ಕುರಿತು ಚರ್ಚೆ ನಡೆಯಲಿದೆ.
ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಆಯವ್ಯಯದ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ. ಬಜೆಟ್ ನಲ್ಲಿ ಶಿಕ್ಷಣ, ಕೃಷಿ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಸದ್ಯ ಎಲ್ಲರ ಚಿತ್ತ ಬಜೆಟ್ ನತ್ತವಿದೆ.
Key words: CM Siddaramaiah, State Budget, tomorrow
The post ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




