ಬೆಂಗಳೂರು,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಬೆಂಗಳೂರು ನಗರದಲ್ಲಿ ಸಿಲಿಂಡರ್ ಸಮಸ್ಯೆ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಸಿಲಿಂಡರ್ ಸಮಸ್ಯೆ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಸಿಎಂ ಸಿದ್ದರಾಮರಾಮಯ್ಯ ಪತ್ರ ಬರೆದಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಗೃಹಬಳಕೆಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಇತ್ತೀಚಿನ ಆದೇಶದ ನಂತರ, ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆಯಾಗಿರುವ ಬಗ್ಗೆ ನಾನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಇದರಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಸೇವೆ ಸಲ್ಲಿಸುವ ಹೋಟೆಲ್ ಗಳು, ಮೆಸ್ ಗಳು, ಹಾಸ್ಟೆಲ್ ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳಿಗೆ ಸಿಲಿಂಡರ್ ಪೂರೈಕೆಗೆ ಅಡ್ಡಿಯಾಗಿದೆ. ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಪುನಃಸ್ಥಾಪಿಸಲು ನಾನು ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದೇನೆ” ಎಂದು ತಿಳಿಸಿದ್ದಾರೆ.
Key words: Disruption, cylinder, supply, CM Siddaramaiah,letter, Union Minister
The post ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




