12
March, 2026

A News 365Times Venture

12
Thursday
March, 2026

A News 365Times Venture

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

Date:

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಬೆಸ್ಕಾಂ ತನ್ನ ಗ್ರಾಹಕರಿಗೆ ಮನವಿ ಮಾಡಿದೆ.

ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ ಮೆಂಟ್‌, ಪೇಯಿಂಗ್‌ ಗೆಸ್ಟ್‌, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ.

ಗೃಹ ಬಳಕೆಯ ಉದ್ದೇಶಕ್ಕೆ ಪಡೆದ ವಿದ್ಯುತ್‌ ಸಂಪರ್ಕವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಗ್ರಾಹಕರು, ತಕ್ಷಣವೇ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಭೇಟಿ ನೀಡಿ ಸಮರ್ಪಕ ವಿದ್ಯುತ್‌ ದರ ವರ್ಗದ  (tariff category) ಬದಲಾವಣೆಗೆ ಅರ್ಜಿ ಸಲ್ಲಿಸಿ ಸಂಪರ್ಕವನ್ನು ನಿಯಮಾನುಸಾರ ಪಡೆಯುವಂತೆ ಬೆಸ್ಕಾಂ ವಿನಂತಿಸಿದೆ.

ಉತ್ಸವ, ಹಬ್ಬ, ಧಾರ್ಮಿಕ ಆಚರಣೆ ಸಂದರ್ಭದಲ್ಲಿ ಕೂಡ ಗೃಹ ಬಳಕೆಯ ವಿದ್ಯುತ್‌ ಸಂಪರ್ಕವನ್ನು ಬಳಸಿಕೊಳ್ಳದೆ, ಸಂಬಂಧಿತ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.

ಗೃಹ ಬಳಕೆಯ ವಿದ್ಯುತ್‌ ಸಂಪರ್ಕವನ್ನು ಅನ್ಯ ಉದ್ದೇಶಗಳಿಗೆ ಬಳಸುವವರ ವಿರುದ್ಧ  ವಿದ್ಯುತ್ ಅಧಿನಿಯಮ, 2003ರ ಕಲಂ 126 ಮತ್ತು 135 ಹಾಗೂ ವಿದ್ಯುತ್ ಸರಬರಾಜು ನಿಯಮಗಳ ಕಲಂ 42 ಮತ್ತು ಅದರ ಉಪಕಲಂಗಳ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ.

Key words: not use, electricity, other purpose, Bescom

The post ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...