ಬೆಂಗಳೂರು,ಮಾರ್ಚ್,12,2026 (www.justkannada.in): ಕಾರವಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ನಿರ್ಮಿಸುವಂತೆ ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಆಗ್ರಹಿಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಶಾಸಕ ದಿನಕರ್ ಶೆಟ್ಟಿ, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾರವಾರದಲ್ಲಿ ನಿರ್ಮಿಸಿದ್ರೆ ನಮ್ಮ ಭಾಗದವರಿಗೆ ಅನುಕೂಲ ಆಗಲ್ಲ ಹಾಗಾಗಿ ಕುಮುಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿ. ಇದರಿಂದ ಶಿರಸಿ, ಕುಮುಟಾ ಹೊನ್ನಾವರ ಸೇರಿ ಎಲ್ಲರಿಗೂ ಅನುಕೂಲವಾಗಲಿದೆ ಎಂದರು.
ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಕಾರವಾರ ಜಿಲ್ಲಾ ಕೇಂದ್ರ ಅಂತಾ ಹೇಳಿದ್ದಾರೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕೆಂಬ ನಿಯಮವಿದೆ. ಈಗಾಗಲೇ ಕಾರವಾರದಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಿದೆ. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ. ಕಾರವಾರಕ್ಕೆ ತಜ್ಞ ವೈದ್ಯರು ಬರುವುದೇ ಕಷ್ಟ. ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದರೆ ವೈದ್ಯರು ಎಲ್ಲಿಂದ ಬರುತ್ತಾರೆ. ತಮ್ಮ ಕ್ಷೇತ್ರಕ್ಕೆ ಅನುಕೂಲ ಆಗಲಿದೆ ಅನ್ನೋದು ಶಾಸಕರ ವಾದ. ಆದರೆ ವೈದ್ಯರು ಬರುವುದುನ್ನು ಗಮನಿಸಬೇಕು ಎಂದು ಸ್ಪಷ್ಟಪಡಿಸಿದರು.
Key words: super specialty hospital, Kumta, Karwar, minister
The post ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




