14
March, 2026

A News 365Times Venture

14
Saturday
March, 2026

A News 365Times Venture

ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ: ಸದನದಲ್ಲಿ ಉತ್ತರ ಕೊಟ್ಟ ಸಚಿವ ಶಿವರಾಜ್ ತಂಗಡಗಿ

Date:

ಬೆಂಗಳೂರು,ಮಾರ್ಚ್,13,2026 (www.justkannada.in): ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಆಗ್ರಹ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮುಂದಿನ ದಿನಗಳಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಆ ಬಗ್ಗೆ ತೀರ್ಮಾನ ಮಾಡಲಿದೆ ಎಂದಿದ್ದಾರೆ.

ವಿಧಾನಪರಿಷತ್ ನಲ್ಲಿ ಶೂನ್ಯವೇಳೆಯಲ್ಲಿ ಶಾಸಕ ರಮೇಶ್‌ಬಾಬು ಅವರ ಈ ಬಗ್ಗೆ ಪ್ರಸ್ತಾಪಿಸಿದರು. ವಾಟಾಳ್‌ ನಾಗರಾಜ್‌ ರಂತಹ ಅನೇಕ ಮಹನೀಯರು ಕನ್ನಡ ಜಲ ನೆಲದ ವಿಷಯವಾಗಿ ನಿರಂತರ ಹೋರಾಟ ಮಾಡಿದ್ದಾರೆ. ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವುದು ಅವಶ್ಯಕ. ಕನ್ನಡಪರ ಚಳವಳಿಗಾರರು ಹೋರಾಟಗಾರರಿಗೆ ವಿಧಿಸಿರುವ ಮೊಕದ್ದಮೆಗಳನ್ನು ವಾಪಸ್‌‍ ಪಡೆಯಬೇಕು ಹಾಗೂ ಕನ್ನಡ ಪರ ಸಂಘ ಸಂಸ್ಥೆಗಳಿಗೆ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಶಿವರಾಜ್ ತಂಗಡಗಿ, ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿದ್ದು ನಿಜ. ವಾಟಾಳ್‌ ನಾಗರಾಜು ಅವರು ಹಿರಿಯರಿದ್ದು, ಕನ್ನಡಪರ ಹೋರಾಟ ಮಾಡುತ್ತಾ ಬಂದಿದ್ದಾರೆ. ಈಗಾಗಲೇ ಕನ್ನಡಪರ ಸಂಘಟನೆಗಳ ಮೇಲೆ ವಿಧಿಸಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆಯೂ ಚರ್ಚೆಯಾಗಿದ್ದು, ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಆ ಸಮಿತಿ ತೀರ್ಮಾನ ಮಾಡಲಿದೆ ಎಂದರು.

Key words: Rajyotsava award, Vatal Nagaraju, Minister, Shivraj Thangadgi

The post ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ: ಸದನದಲ್ಲಿ ಉತ್ತರ ಕೊಟ್ಟ ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ- ನಾಗಲಕ್ಷ್ಮಿ ಚೌದರಿ

ಮೈಸೂರು, ಮಾರ್ಚ್,13,2026 (www.justkannada.in): ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ...

ಬಜೆಟ್ ಬಗ್ಗೆ ಸ್ವಪಕ್ಷದ ಶಾಸಕ ಅಸಮಾಧಾನ : ಇಂತವರನ್ನ ಪಕ್ಷದಿಂದ ಹೊರಹಾಕಬೇಕೆಂದ ಬೇಳೂರು ಗೋಪಾಲಕೃಷ್ಣ

ಬೆಂಗಳೂರು,ಮಾರ್ಚ್,13,2026 (www.justkannada.in):  ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ...

ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ

ನವದೆಹಲಿ,ಮಾರ್ಚ್,13,2026 (www.justkannada.in): ದೇಶದಲ್ಲಿ LPG ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ಗೆ...