ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರಿನ ಹೋಟೆಲ್ ಮಾಲಕಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.
ಸಿಲಿಂಡರ್ ಪೂರೈಕೆಯಲ್ಲಿ ಶೇ50ಕ್ಕೂ ಹೆಚ್ಚು ಕಡಿತವಾಗಿರುವುದರಿಂದ ಹೋಟೆಲ್ ಗಳನ್ನು ನಡೆಸುವುದು ಕಷ್ಟವಾಗುತ್ತಿದೆ. ಇದರ ಜೊತೆಗೆ ಸಿಲಿಂಡರ್ ಬೆಲೆ ಏರಿಕೆಯ ಪರಿಣಾಮ ಮಹಿಳಾ ಉದ್ಯಮಿಗಳ ಅಲ್ಪ ಲಾಭಾಂಶ ಸಂಪೂರ್ಣವಾಗಿ ಕಡಿಮೆಯಾಗಿದೆ. ಹೀಗಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ತಕ್ಷಣ ಸುಗಮಗೊಳಿಸಬೇಕು. ಮಹಿಳಾ ಉದ್ಯಮಿಗಳು ನಡೆಸುವ ಹೋಟೆಲ್‌ಗಳಿಗೆ ಗ್ಯಾಸ್ ಹಂಚಿಕೆಯಲ್ಲಿ ವಿಶೇಷ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
Key words: LPG, cylinder supply, Hotel owner, Letter, PM Modi
The post ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




