ನವದೆಹಲಿ,ಮಾರ್ಚ್,16,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಪ್ರಾರಂಭವಾದಾಗಿನಿಂದ ಈವರೆಗೆ 4335 ವಿಮಾನಗಳ ಹಾರಾಟ ರದ್ದಾಗಿದೆ ಎಂದು ಕೇಂದ್ರ ನಾಗರೀಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದರು.
ಲೋಕಸಭೆಯಲ್ಲಿ ಇಂದು ಮಾತನಾಡಿದ ಕೇಂದ್ರ ನಾಗರೀಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಇರಾನ್ –ಇಸ್ರೇಲ್ ಯುದ್ದ ಶುರುವಾಗಿನಿಂದ ಈವರೆಗೆ 4335 ವಿಮಾನಗಳ ಹಾರಾಟ ರದ್ದುಗೊಂಡಿದೆ. ವಿದೇಶಿ ವಿಮಾನಯಾನ ಸಂಸ್ಥೆಯ 1187 ವಿಮಾನಗಳ ಹಾರಾಟ ರದ್ದಾಗಿದೆ ಎಂದು ಮಾಹಿತಿ ನೀಡಿದರು.
ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಮಧ್ಯಪ್ರಾಚ್ಯದಲ್ಲಿ ವಿಮಾನ ಕಾರ್ಯಾಚರಣೆ ನಡೆಸುವ ಅಗತ್ಯವಲ್ಲ. ವಿಮಾನಯಾನ ರದ್ದತಿಯಿಂದಾಗಿ ಟಿಕೆಟ್ ದರ ಏರಿಕೆಯಾಗದಂತೆ ಕ್ರಮ ವಹಿಸಲಾಗಿದೆ. ಟಿಕೆಟ ದರಗಳು ಅಸಹಜವಾಗಿ ಏರಿಕಯಾಗದಂತೆ ಕ್ರಮ ವಹಿಸಿದ್ದೇವೆ ಎಂದು ರಾಮ್ ಮೋಹನ್ ನಾಯ್ಡು ತಿಳಿಸಿದರು.
Key words: Iran-Israel war, 4335 flights, canceled, Union Minister, Ram Mohan Naidu
The post ಇರಾನ್-ಇಸ್ರೇಲ್ ಯುದ್ದ: 4335 ವಿಮಾನಗಳ ಹಾರಾಟ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




