16
March, 2026

A News 365Times Venture

16
Monday
March, 2026

A News 365Times Venture

ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌

Date:

ಬೆಂಗಳೂರು, ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ಕೆಹೆಚ್. ಮುನಿಯಪ್ಪ ರವರು ಮಾಧ್ಯಮಕ್ಕೆ ತಿಳಿಸಿದರು.

ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಸರಬರಾಜಿನ ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ ನಂತರ ಸಚಿವ ಕೆ.ಎಚ್ ಮುನಿಯಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು ಬಳಕೆಯ ಪ್ರಮಾಣ ಅಧಿಕವಾಗಿದೆ ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕ ರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಎಲ್‌ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ ಎಂದರು.

ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ ಎಂದರು.

ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಸಭೆಯಲ್ಲಿ  ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್,ದಿವ್ಯ, ಮುರಳಿ ಚಾರ್,ಸುಬ್ರತ್ ಚಟರ್ಜಿ,ರಾಜೇಶ್ ಸಿಂಗ್,ಸಂಜಯ್ ಕುಮಾರ್ ಸಿಂಗ್,ಪ್ರಣಯ ದೇವನಾಗನ್,ರವಿಕುಮಾರ್ ತಂಡಲ್,ಪ್ರಸೂನ್ ,  ಉಪಸ್ಥಿತರಿದ್ದರು.

Key words: Soon, gas, supplied, hotels, Minister, K.H. Muniyappa

The post ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,16,2026 (www.justkannada.in):   ಡಿಸಿಎಂ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ...

ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರವೇ ಸೂಕ್ತ ಪರಿಹಾರ ನೀಡಬೇಕು- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮಾರ್ಚ್,16,2026 (www.justkannada.in): ದೇಶದಲ್ಲಿ ಉಂಟಾಗಿರುವ ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರ ಸರ್ಕಾರವೇ...

ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ...

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ...