ಮಂಡ್ಯ,ಮಾರ್ಚ್,25,2026 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಎನ್ ಎಸ್ ಸೆಕ್ಷನ196 (1)(ಎ) ಅಡಿ ಅನ್ಯಕೋಮಿನ ಭಾವನೆಗೆ ಧಕ್ಕೆ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದೆ.
ಮಾರ್ಚ್ 23 ರಂದು ಸಂಜೆ ಮದ್ದೂರಿನಲ್ಲಿ ಹಿಂದೂ ಸಂಘಟನೆಗಳು ಬಲಿದಾನ್ ದಿವಸ್ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಈ ಇಬ್ಬರು ನಾಯಕರು ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ.
Key words: FIR, against, MLA, Yatnal, Ananth Kumar Hegde, Maddur
The post ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




