2
April, 2026

A News 365Times Venture

2
Thursday
April, 2026

A News 365Times Venture

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ

Date:

ದಾವಣಗೆರೆ, ಏಪ್ರಿಲ್, 2,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ.  ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ 52000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ 1,31,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಬದ್ಧ ಅನುದಾನ ದೊರೆತಿಲ್ಲ

ಸಾಲದ ರಾಮಯ್ಯ ಎಂದು ತನ್ನನ್ನು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ. ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಗ್ಯಾರಂಟಿಗಳಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ

ಮಾಜಿ ಸಿಎಂ ಬೊಮ್ಮಾಯಿಯವರು ರಾಜ್ಯದ ಸಾಲದ ದಾಖಲೆಗಳನ್ನು ಸರ್ಕಾರ ನೀಡಲೆಂದು ಹೇಳಿರುವ ಬಗ್ಗೆ ಉತ್ತರಿಸಿ, ಆರ್ಥಿಕತೆಯ ಸ್ಥಿತಿಗತಿಗಳ ಎಲ್ಲ ಅಂಶಗಳ ದಾಖಲೆಗಳನ್ನು ಬಜೆಟ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯವರ ಅವಧಿಯಲ್ಲಿ  530000 ಕೋಟಿ ಸಾಲ ಮಾಡಲಾಗಿದೆ. ಗ್ಯಾರಂಟಿ ಯೋಜನೆಯು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿ , ಇದರಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ ಎಂದರು.

ಗುತ್ತಿಗೆದಾರರ ಬಾಕಿ ಬಿಲ್ಲು ಪಾವತಿಸಲಾಗುತ್ತಿದೆ

ಗುತ್ತಿಗೆದಾರರಿಗೆ ಬಾಕಿ ಪಾವತಿ ಆಗದಿರುವ ಬಗ್ಗೆ ಪ್ರತಿಕ್ರಿಯೆಗಳು ಎದ್ದಿರುವ ಬಗ್ಗೆ ಉತ್ತರಿಸಿ, ಬಿಜೆಪಿಯವರ ಅವಧಿಯಲ್ಲಿ ಗುತ್ತಿಗೆದಾರರ 29ಸಾವಿರ ಕೋಟಿಯಷ್ಟು ಬಾಕಿ ಉಳಿಸಲಾಗಿತ್ತು. ಅದರಲ್ಲಿ 24 ಸಾವಿರ ಕೋಟಿ ಬಾಕಿ ಬಿಲ್ಲು ಪಾವತಿಸಲಾಗಿದೆ. ಈ ಬಗ್ಗೆ ದಾಖಲಾತಿಯ ಆಧಾರದಲ್ಲಿ ಸ್ಪಷ್ಟ ಉತ್ತರವನ್ನು ಅಧಿವೇಶನದಲ್ಲಿ ನೀಡಲಾಗಿದೆ ಎಂದರು.

ಬೆಲೆ ಏರಿಕೆ ನಿಯಂತ್ರಿಸುವುದು ಕೇಂದ್ರದ ಹೊಣೆಗಾರಿಕೆ

ಇರಾನ್ ಯುದ್ಧ ಪರಿಣಾಮ ಬೆಲೆ ಏರಿಕೆಗೆ ರಾಜ್ಯಸರ್ಕಾರದ ಸಿದ್ದತೆಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬೆಲೆ ಏರಿಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು. ಕೇಂದ್ರ ಪೂರೈಸುವ ಗ್ಯಾಸ್ ಪೆಟ್ರೋಲ್ ಡೀಸೆಲ್ಗಳನ್ನು ವಿತರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆಗಳು ಕಡಿಮೆಯಿದೆ ಎಂದರು.

ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ

ಒಳಮೀಸಲಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ರಾಜ್ಯದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅಹಿಂದ ಮತಗಳು ಬಿಜೆಪಿಗೆ ಬರಲಿವೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಅಹಿಂದ ವರ್ಗಗಳ ಮೇಲೆ ಕಾಳಜಿಯಿಲ್ಲ.ಬಿಜೆಪಿಯವರು ಎಂದಿಗೂ ಶ್ರೀಮಂತರ ಪರ.  ನಮ್ಮ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಂತೆ ನಡೆದು, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ನಮ್ಮ ಸರ್ಕಾರ ಬಿಜೆಪಿ ಬೆಂಬಲಿಗ ಮತದಾರರನ್ನು ಸೇರಿಸಿ, ಸರ್ವರಿಗೂ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನ ಜನರನ್ನು ಸಬಲೀಕರಣಗೊಳಿಸಲು ಇವುಗಳು ನೆರವಾಗುತ್ತವೆ ಎಂದರು.

ಹಂತಹಂತವಾಗಿ ಖಾಲಿ ಹುದ್ದೆಗಳ ಭರ್ತಿ

ಖಾಲಿ ಹುದ್ದೆಗಳ ನೇಮಕಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ,  ಈ ವರ್ಷ 56,432 ಹುದ್ದೆಗಳ ನೇಮಕಾತಿ ಮಾಡಲಿದ್ದು, ಹೀಗೆ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

Key words: People, support,  Congress, by-elections, CM Siddaramaiah

The post ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸವಾಲುಗಳ ಮಧ್ಯೆ 3 ವರ್ಷದಿಂದ ಶಾಂತಿ ಕಾಪಾಡುವಲ್ಲಿ ಯಶಸ್ವಿ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,2,2026 (www.justkannada.in): ರಾಜ್ಯದಲ್ಲಿ ಸವಾಲುಗಳ ಮಧ್ಯೆ ಮೂರು ವರ್ಷದಿಂದ ಶಾಂತಿ ಕಾಪಾಡುವಲ್ಲಿ...

KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು, ಏಪ್ರಿಲ್,2,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು...

ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್

ಬಾಗಲಕೋಟೆ,ಏಪ್ರಿಲ್,2,2026 (www.justkannada.in): ಸಚಿನ್,  ವಿರಾಟ್ ಕೊಹ್ಲಿ, ಲಾರಾ ಸೇರಿ ಅನೇಕರು ಸೇರಿ...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹಾಕುಸಿತ

ಮುಂಬೈ,ಏಪ್ರಿಲ್,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ ಭಾಷಣ...