30
May, 2026

A News 365Times Venture

30
Saturday
May, 2026

A News 365Times Venture

ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲ- ಡಿಸಿಎಂ ಡಿಕೆ ಶಿವಕುಮಾರ್

Date:

ದಾವಣಗೆರೆ,ಏಪ್ರಿಲ್,3,2026 (www.justkannada.in):  ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ವಿಫಲವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಬಿಜೆಪಿ ನಾಯಕರು ನಮ್ಮನ್ನು ‘ಸಾಲದ ಸರ್ಕಾರ’ ಎಂದು ಕರೆಯುತ್ತಿದ್ದಾರೆ. ಆದರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಾಲ ಪಡೆದಿಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ಅವರು ದೇಶದ ಪ್ರತಿಯೊಬ್ಬರ ಅಕೌಂಟ್‌ಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದಿದ್ದರು ಎಲ್ಲಿ ಹಾಕಿದ್ದಾರೆ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ? ನಾವು ಕನಿಷ್ಠ ಪಕ್ಷ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ., ಉಚಿತ ವಿದ್ಯುತ್, ಅಕ್ಕಿ ಮತ್ತು ಬಸ್ ಪ್ರಯಾಣದ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದೇವೆ ಎಂದರು.

ಇನ್ನು ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪನವರಿಗಿಂತ ಹೆಚ್ಚಿನ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Central government, failed, control, price hikes, DCM, DK Shivakumar

The post ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು...

ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ...