ಬೆಂಗಳೂರು,ಏಪ್ರಿಲ್,9,2026 (www.justkannada.in): ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸುವುದನ್ನು ಏಪ್ರಿಲ್ 15ಕ್ಕೆ ಮುಂದೂಡಿಕೆ ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 21 ಮಂದಿ ಇಂದು ಕೋರ್ಟ್ ಗೆ ಹಾಜರಾಗಿದ್ದರು. ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ ಎನ್ನಲಾಗಿತ್ತು.
ಆದರೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟವನ್ನು ಏಪ್ರಿಲ್ 15ಕ್ಕೆ ಮುಂದೂಡಿಕೆ ಮಾಡಿದ್ದು ಅಂದು ಶಾಸಕ ವಿನಯ್ ಕುಲಕರ್ಣಿ ಜೈಲೋ ಅಥವಾ ಖುಲಾಸೆಯೋ ತಿಳಿಯಲಿದೆ.
Key words: Yogeesh Gowda, murder case, Vinay kulkarni, court,
The post ಯೋಗೀಶ್ ಗೌಡ ಕೊಲೆ ಕೇಸ್ : ಏ.15ಕ್ಕೆ ತೀರ್ಪು ಪ್ರಕಟ ಮುಂದೂಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




