ಬೆಂಗಳೂರು,ಏಪ್ರಿಲ್,15,2026 (www.justkannada.in): ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ.
ಹೆಚ್.ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದು ಈ ವೇಳೆ ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.
ರಾಜ್ಯದ 18 ಬೇಡಿಕೆಗಳುಳ್ಳ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
Key words: CM Siddaramaiah, submits , Appeal, PM Modi
The post ಪ್ರಧಾನಿ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




