19
April, 2026

A News 365Times Venture

19
Sunday
April, 2026

A News 365Times Venture

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ

Date:

ನವದೆಹಲಿ,ಏಪ್ರಿಲ್,9,2026 (www.justkannada.in):  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿge ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,  30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಕಾಂಗ್ರೆಸ್ ವಿರುದ್ದ ಕೆಂಡಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, 1996 ರಿಂದ 2026 ಕರಾಳ ಇತಿಹಾಸ ಮರುಕಳಿಸಿದೆ.  ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು. ಅಂದು ಹೆಚ್.ಡಿ. ದೇವೇಗೌಡರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು.

ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಪ್ರಧಾನಿ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ  ಎಂದು ಹರಿಹಾಯ್ದಿದ್ದಾರೆ.

ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ. ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿಮಗೆ ನಿರಾಶೆ ಬೇಕಿಲ್ಲ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದು  ಹೆಚ್ ಡಿಕೆ ತಿಳಿಸಿದ್ದಾರೆ.

Key words: Defeat, Women’s Reservation Bill, HDK

The post ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು  ...