30
July, 2025

A News 365Times Venture

30
Wednesday
July, 2025

A News 365Times Venture

ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್.

Date:

ರಾಯಚೂರು,ಫೆಬ್ರವರಿ,26,2025 (www.justkannada.in):  ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಗ್ರೇಡ್ 2 ತಹಸೀಲ್ದಾರ್ ವೊಬ್ಬರನ್ನು ಅಮಾನತು ಮಾಡಲಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್  ಸಸ್ಪೆಂಡ್ ಆದವರು.  ವಿವಿಧ ಪಿಂಚಣಿ ಯೋಜನೆ ತಿರಸ್ಕೃತ ಅರ್ಜಿಗಳನ್ನು ವಿಲೇವಾರಿ ಮಾಡುವ ವೇಳೆ ವಂಚನೆ ಎಸಗಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

2024-25ನೇ ಸಾಲಿನಲ್ಲಿ ದೇವದುರ್ಗ ತಾಲೂಕದಲ್ಲಿ 10,470 ಅರ್ಜಿಗಳ ವಿಲೇವಾರಿ ಮಾಡಲಾಗಿದ್ದು, ಫಲಾನುಭವಿಗಳಿಗೆ ವಿವಿಧ ಮಾಸಾಶನ ಮಂಜೂರು ಮಾಡಿ ವಂಚನೆ ಎಸಗಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಕಂದಾಯ ನಿರೀಕ್ಷಕರು ತಿರಸ್ಕರಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿ ವಂಚನೆ ಎಸೆಗಿರುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ವೆಂಕಟೇಶರನ್ನು ಅಮಾನತು ಮಾಡಲಾಗಿದೆ.

Key words: government, Economic loss, allegation, Grade 2 tehsildar, suspended

The post ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...